ಸಿಎಂ ಬೊಮ್ಮಾಯಿ ವಿರುದ್ದ ಕೇಸ್ ದಾಖಲಿಸುವಂತೆ ಸುರ್ಜೆವಾಲ ಒತ್ತಾಯ

ಬೆಂಗಳೂರು,ನ.26-ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿನ ಮತದಾರರ ಪಟ್ಟಿಯ ಅಕ್ರಮಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ವತಿಯಿಂದ ನೀಡಲಾದ ದೂರಿನ ಮೇಲೆ ಚುನಾವಣಾ ಆಯೋಗ ತ್ವರಿತ ಕ್ರಮ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ತನಿಖೆಯನ್ನು ಕೇವಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ, ಮತದಾರರ […]