ಸುವರ್ಣಸೌಧ ಎದುರು ರಾಣಿ ಚೆನ್ನಮ್ಮ, ಸಂಗೋಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ
ಬೆಂಗಳೂರು,ಅ.2- ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಕಿತ್ತೂರು ರಾಣಿ ಚೆನ್ನಮ್ಮ ಹಾಗು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳೆ ಎಂಬುದರಲ್ಲಿ ಅನುಮಾನವಿಲ್ಲ. ಈ ವಿಚಾರ ಕರ್ನಾಟಕ […]