ಆ್ಯಪ್ ಆಧಾರಿತ ಓಲಾ, ಊಬರ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ

ಬೆಂಗಳೂರು,ಅ.8- ಲೈಸೆನ್ಸ್ ನೀಡುವಾಗ ಸಾರಿಗೆ ಇಲಾಖೆ ನೀಡಿರುವ ಷರತ್ತು ಉಲ್ಲಂಘಿಸಿರುವ ಓಲಾ-ಊಬರ್ ವಾಹನಗಳನ್ನು ಸೀಜ್ ಮಾಡಲು ಆದೇಶ ನೀಡ ಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮ ಉಲ್ಲಂಘಿಸಿ ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿರುವ ವಾಹಗಳನ್ನು ಸೀಜ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ದುಬಾರಿ ದರ ವಿಧಿಸುತ್ತಿರುವ ಬಗ್ಗೆ ನೋಟಿಸ್ ನೀಡಲಾಗಿದೆ. ನೋಟಿಸ್‍ಗೆ ಆ ಸಂಸ್ಥೆಗಳಿಂದ ಉತ್ತರ […]