ರಾಷ್ಟ್ರಪತ್ನಿ ಪದ ಬಳಕೆ : ಸಂಸತ್ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ

ನವದೆಹಲಿ, ಜು.28- ಅಮಾನತು ವಿರೋಧಿಸಿ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಪಕ್ಷಗಳ ಸಂಸದರು ನಡೆಸುತ್ತಿರುವ ಅಹೋರಾತ್ರಿ ಹೋರಾಟಕ್ಕೆ ಪ್ರತಿಯಾಗಿ, ಬಿಜೆಪಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌದರಿ ನೀಡಿರುವ ಹೇಳಿಕೆ ಮುಂದಿಟ್ಟುಕೊಂಡು ಸಂಸತ್ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದೆ. ರಾಷ್ಟ್ರಪತಿ ಬದಲಾಗಿ ಅಧಿರ್ ರಂಜನ್ ಚೌದರಿ ರಾಷ್ಟ್ರಪತ್ನಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಗಳಿವೆ. ಈ ಕುರಿತು ಭಾರೀ ಪ್ರತಿಭಟನೆ ನಡೆಸಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಮುಗಿ ಬಿದ್ದಿದೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ಮುಜುಗರ ಅನುಭವಿಸುವಂತಾಗಿದೆ. […]