RBIನಿಂದ 50,000 ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು,ಜ.15- ಕೋವಿಡ್ ಅಬ್ಬರ ಹಾಗೂ ಲಾಕ್‍ಡೌನ್‍ನಿಂದ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿರುವ ರಾಜ್ಯ ಸರ್ಕಾರ, ಈ ಹಣಕಾಸು ವರ್ಷದಲ್ಲಿ ಬಹುವಾಗಿ ನೆಚ್ಚಿಕೊಂಡಿರುವುದು ಸಾಲವನ್ನೇ. ಬಜೆಟ್ ಅನುಷ್ಠಾನ ಹಾಗೂ ಸರ್ಕಾರಿ ನೌಕರರ ವೇತನ, ಪಿಂಚಣಿ ಪಾವತಿಗಾಗಿ ಸರ್ಕಾರ ಸಾಲದ ಮೊರೆ ಹೋಗಿದೆ. ಆ ನಿಟ್ಟಿನಲ್ಲಿ ಜನವರಿಯಿಂದ ಡಿಸೆಂಬರ್‍ವರೆಗೆ ಆರ್‌ಬಿಐ ಮೂಲಕ ಬರೋಬ್ಬರಿ 50,000 ಕೋಟಿ ರೂ. ಸಾಲ ಎತ್ತುವಳಿ ಮಾಡಲು ಮುಂದಾಗಿದೆ. ಕೋವಿಡ್ ಲಾಕ್‍ಡೌನ್‍ನಿಂದ ರಾಜ್ಯದ ಬೊಕ್ಕಸ ಸಂಪೂರ್ಣ ಸೊರಗಿ ಹೋಗಿದೆ. ಇತ್ತ ನಿರೀಕ್ಷಿತ ಗುರಿಯಂತೆ ತೆರಿಗೆ ಮೂಲಗಳಿಂದ ಆದಾಯ ಸಂಗ್ರಹ […]