ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ : ಎರಡು ವಿಶೇಷ ತಂಡ ರಚನೆ

ಆನೇಕಲ್, ಜ.6- ಕಾರಿನೊಳಗೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಅನೇಕಲ್ ಠಾಣೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಈಗಾಗಲೇ 2 ತಂಡಗಳನ್ನು ರಚಿಸಲಾಗಿದ್ದು , ಈ ತಂಡಗಳು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕುತ್ತಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‍ಪಿ ಡಾ.ವಂಶಿಕೃಷ್ಣ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕೊಲೆಯಾಗಿರುವ ರಾಜಶೇಖರ ರೆಡ್ಡಿ ಅವರು ಮೂಲತಃ ಚಿತ್ತೂರಿನವರು. ಆರೇಳು ವರ್ಷಗಳಿಂದ ಬೆಂಗಳೂರಿನ ಬಿಟಿಎಂ ಲೇಔಟ್‍ನಲ್ಲಿ ವಾಸವಾಗಿದ್ದರು ಎಂಬುದು ಸದ್ಯದ ಮಾಹಿತಿಯಿಂದ ತಿಳಿದು ಬಂದಿದೆ […]