ಮುಂದಿನ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಕ್ಕೆ ಕುಸಿಯಲಿದೆ : ನಿತೀಶ್‍ ಕುಮಾರ್

ಪಾಟ್ನಾ,ಸೆ.4-ಪ್ರತಿಪಕ್ಷಗಳ ಒಗ್ಗಟ್ಟಿನಿಂದಾಗಿ ಬಿಜೆಪಿಯನ್ನು ಅಧಿಕಾರದಿಂದ ಹೊರದಬ್ಬುವ ಅಭಿಯಾನ ಯಶಸ್ವಿಯಾಗಲಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್‍ಕುಮಾರ್ ಹೇಳಿದ್ದಾರೆ. ಪಾಟ್ನಾದಲ್ಲಿ ನಡೆಯುತ್ತಿರುವ ಜೆಡಿಯುನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳಲ್ಲಿನ ಒಗ್ಗಟ್ಟಿನ ಹೋರಾಟದ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ. ಈ ಅಭಿಯಾನವನ್ನು ಮುನ್ನಡೆಸಲು ನಾನು ಸ್ವಯಂ ಸಿದ್ದನಿದ್ದೇನೆ. ಒಂದು ವೇಳೆ ನಾವು ನಿರೀಕ್ಷೆಯಂತೆ ಕೆಲಸ ಮಾಡಿದರೆ ಬಿಜೆಪಿ 50ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲಲಾರದು ಎಂದಿದ್ದಾರೆ. ಎಲ್ಲಾ […]