ಮತದಾರರ ಪಟ್ಟಿ ಮರು ಪರಿಷ್ಕರಣೆಗೆ ಡಿಕೆಶಿ ಆಗ್ರಹ

ಬೆಂಗಳೂರು, ನ.26- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದರಿಂದ ಮರು ಪರಿಷ್ಕರಣೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಮಾಹಿತಿ ಕಳವು ವಿಚಾರವಾಗಿ ಕಾಂಗ್ರೆಸ್ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ನಾನು ಆಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಮೇಲಿನವರ ಆದೇಶದ ಮೇರೆಗೆ ನಾವು ಕೆಲಸ ಮಾಡಿದ್ದೇವೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ. ಈ ಆದೇಶ ಕೊಟ್ಟವರು ಯಾರು ಎಂಬುದು ಗೊತ್ತಾಗಬೇಕಿದೆ […]