ಚುನಾವಣಾ ಸುಧಾರಣೆಯ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು : ವಂದಿತಾ ಶರ್ಮ

ಬೆಂಗಳೂರು,ಆ.1-ಭಾರತದ ಚುನಾವಣಾ ಆಯೋಗ ಇಂದಿನಿಂದ ಅನುಷ್ಠಾನಗೊಳಿಸುತ್ತಿರುವ ಚುನಾವಣಾ ಸುಧಾರಣೆಗಳನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಉದ್ಘಾಟಿಸಿದರು. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿ ವತಿಯಿಂದ ವಿಕಾಸಸೌಧದಲ್ಲಿಂದು ಆಯೋಜಿಸಿದ್ದ ಚುನಾವಣಾ ಸುಧಾರಣಾ ಕಾರ್ಯಕ್ರಮ ಉದ್ಘಾಟಿಸಿ ನಂತರ ಅವರು ಮಾತನಾಡಿದರು. ವಿಶ್ವದಲ್ಲೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತ. ದೇಶದಲ್ಲಿ ಕೂಡ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಅದಕ್ಕಾಗಿ ಚುನಾವಣಾ ಆಯೋಗ ಹಲವು ಸುಧಾರಣೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅಲ್ಲದೆ ಸರಳೀಕರಣ ತಂದು ಪಾರದರ್ಶಕವಾಗಿ ಅನುಷ್ಠಾನಗೊಳಿಸುತ್ತಿದೆ. ಸತತ […]