ಕಾಡುಪ್ರಾಣಿಗಳಿಗೂ ಪುನರ್ವಸತಿ ಕೇಂದ್ರ ತೆರೆಯಲು ಮುಂದಾದ ಸರ್ಕಾರ

ಬೆಂಗಳೂರು, ಜ.23- ರಾಜ್ಯದಲ್ಲಿ ಹಲವು ತಿಂಗಳಿನಿಂದ ಕಾಡುಪ್ರಾಣಿಗಳಿಂದ ಉಂಟಾಗುತ್ತಿರುವ ಹಾವಳಿಯನ್ನು ತಪ್ಪಿಸಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಪುನರ್ವಸತಿ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ. ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದ 11 ವರ್ಷದ ಬಾಲಕ ಜಯಂತ್ ಮೇಲೆ ಚಿರತೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾದ ಕಾರಣ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕಾಡುಪ್ರಾಣಿಗಳು ಮತ್ತು ಮಾನವ ನಡುವೆ ಉಂಟಾಗುತ್ತಿರುವ ಸಂಘರ್ಷವನ್ನು ತಪ್ಪಿಸಲು ಪುನರ್ವಸತಿ ಕೇಂದ್ರಗಳನ್ನು ತೆರೆಯಲು […]