ಅಮಾನತುಗೊಂಡ ಟ್ವಿಟರ್ ಖಾತೆಗಳು ಮರು ಸ್ಥಾಪನೆಯಾಗಲಿವೆ

ನವದೆಹಲಿ,ನ.25- ಕಾನೂನು ಉಲ್ಲಂಘನೆ ಆರೋಪದ ಮೇಲೆ ಸಾಮಾಜಿಕ ಜಾಲತಾಣ ಟ್ವಿಟರ್‍ನಿಂದ ಅಮಾನತುಗೊಂಡವರಿಗೆ ಸಾಮಾನ್ಯ ಕ್ಷಮಾದಾನ ನೀಡುವ ಮೂಲಕ ಅವರ ಖಾತೆಯನ್ನು ಮತ್ತೆ ಪ್ರತಿಷ್ಠಾಪಿಸಲಾಗುವುದು ಎಂದು ಸಂಸ್ಥೆ ಮುಖ್ಯಸ್ಥ ಎಲೋನ್ ಮಸ್ಕ್ ತಿಳಿಸಿದ್ದಾರೆ. ಟ್ವಿಟರ್‍ನಿಂದ ಅಮಾನತುಗೊಂಡವರನ್ನು ಮತ್ತೆ ಖಾತೆಗೆ ಸೇರಿಸಬೇಕೇ ಬೇಡವೇ? ಎಂಬ ಬಗ್ಗೆ ನಡೆಸಲಾದ ಆನ್‍ಲೈನ್ ಸಮೀಕ್ಷೆಯಲ್ಲಿ ಬಹುತೇಕ ಮಂದಿ ತಪ್ಪು ಮಾಡಿದವರಿಗೆ ಕ್ಷಮಾದಾನ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಸ್ಕ್ ಸ್ಪಷ್ಟಪಡಿಸಿದ್ದಾರೆ. ಆನ್‍ಲೈನ್ ಸಮೀಕ್ಷೆಯಲ್ಲಿ ಭಾಗವಹಿಸಿದ 3.16 ದಶಲಕ್ಷಕ್ಕೂ ಹೆಚ್ಚು […]

ಟ್ರಂಪ್ ಟ್ವಿಟರ್ ಖಾತೆ ಮರುಸ್ಥಾಪನೆ : ಎಲಾನ್ ಮಸ್ಕ್

ವಾಷಿಂಗ್ಟನ್,ನ.20-ಅಮಾನತುಗೊಂಡಿದ್ದ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆ ಮರುಸ್ಥಾಪನೆ ಮಾಡಲಾಗುತ್ತದೆ ಎಂದು ಟ್ವಿಟರ್‍ನ ಹೊಸ ಮುಖ್ಯಸ್ಥ ಎಲಾನ್ ಮಸ್ಕ್ ಹೇಳಿದ್ದಾರೆ. ಕಳೆದ 2021ರ ಜನವರಿ 6ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಘೋಷಣೆ ವೇಳೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂದಲೆ ನಡೆಸಿದಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಟ್ರಂಪ್ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿತ್ತು. ಮಂಗಳೂರು ಆಟೋ ಸ್ಪೋಟ ಆಕಸ್ಮಿಕವಲ್ಲ, ಭಯೋತ್ಪಾದನಾ ಕೃತ್ಯ ಈಗ ಪರಿಸ್ಥತಿ ಬದಲಾಗಿದೆ ಇದರ ಬೆನ್ನಲ್ಲೇ, ಟ್ರಂಪ್ ಖಾತೆ […]