ನಾರಾಯಣಗುರು ಸ್ತಬ್ಧಚಿತ್ರ ತಿರಸ್ಕರಿಸಿದ್ದಕ್ಕೆ ಎಚ್‍ಡಿಕೆ ಆಕ್ರೋಶ

ಬೆಂಗಳೂರು, ಜ.15- ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತ ಭೇದಗಳನ್ನು ಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು. ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು ಎಂದು ಸಾರಿ […]