ಹಣ ಕೊಟ್ಟು ಸಹಾಯ ಮಾಡಿದ್ದ ಸಂಬಂಧಿಯನ್ನೇ ಕೊಂದಿದ್ದ ದಂಪತಿ 7 ವರ್ಷಗಳ ನಂತರ ಅರೆಸ್ಟ್

ಬೆಂಗಳೂರು, ಫೆ. 17- ಸಾಲ ತೀರಿಸಲು ಸಹಾಯ ಮಾಡಿದ ಸಂಬಂಧಿಯನ್ನು ಮನೆಗೆ ಕರೆಸಿಕೊಂಡು ಉಸಿರುಗಟ್ಟಿಸಿ ಕೊಲೆ ಮಾಡಿ ಶವವನ್ನು ಆಂಧ್ರಪ್ರದೇಶದ ಬಳಿ ಬಿಸಾಡಿ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಪತಿಯನ್ನು ಬಂಧಿಸುವಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಶೇಕ್ ಬಿ.ಡಿ.ಮೊಹಮದ್ ಗೌಸ್ (39) ಮತ್ತು ಕೌಸರ್ ಅಲಿಯಾಸ್ ಹೀನಾ (27) ಬಂಧಿತ ದಂಪತಿ. ಆರೋಪಿ ದಂಪತಿ 2012ರಲ್ಲಿ ವಿವಾಹವಾಗಿ ಆಂಧ್ರಪ್ರದೇಶದಲ್ಲಿ ವಾಸವಾಗಿದ್ದು ತದನಂತರ ಬೆಂಗಳೂರಿಗೆ ಬಂದು ಹೆಗ್ಗನಹಳ್ಳಿಯ ಗಜಾನನ ನಗರದ 10ನೆ ಅಡ್ಡರಸ್ತೆ ಯ ಕಟ್ಟಡವೊಂದರ […]