20 ಸಾವಿರ ಕೋಟಿ ರೂ.ಗಳ ಬಿಲ್ ಬಿಡುಗಡೆಗೆ ಗುತ್ತಿಗೆದಾರರ ಆಗ್ರಹ

ಬೆಂಗಳೂರು,ಜ.18- ಬಾಕಿ ಇರುವ 20 ಸಾವಿರ ಕೋಟಿ ರೂ.ಗಳ ಬಿಲ್ ಬಿಡುಗಡೆಗೆ ಒತ್ತಾಯಿಸಿ ಇಂದು ಗುತ್ತಿಗೆದಾರರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಸಾವಿರಾರು ಪದಾಕಾರಿಗಳು ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿ 40 ಪರ್ಸೆಂಟ್ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಮಂಜುನಾಥ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನಮಗೆ ಸರ್ಕಾರದಿಂದ ಸುಮಾರು 20 ಸಾವಿರ ಕೋಟಿ ರೂ.ಗಳ ಬಿಲ್ ಬರಬೇಕಿದೆ. […]