ಅತಿವೃಷ್ಠಿ ಪರಿಹಾರಕ್ಕೆ 600 ಕೋಟಿ ಬಿಡುಗಡೆ : ಸಿಎಂ

ಬೆಂಗಳೂರು,ಸೆ.13- ರಾಜ್ಯದಲ್ಲಿ ಸುರಿದ ಮಳೆಯಿಂದ ಮೂಲಭೂತ ಸೌಕರ್ಯಗಳಿಗೆ ಹಾನಿಯಾಗಿದ್ದು ತತ್‍ಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು 600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಮಹದೇವ.ಕೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ನಿರೀಕ್ಷೆಗೂ ಮೀರಿದ ಹಾನಿಯಾಗಿದೆ. ಲೋಕೋಪಯೋಗಿ ಇಲಾಖೆಯಿಂದ 300 ಕೋಟಿ, ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯಿಂದ 300 ಕೋಟಿ ಸೇರಿ ಒಟ್ಟು 600 ಕೋಟಿ ರೂ.ಗಳನ್ನು ತತ್‍ಕ್ಷಣವೇ ಪರಿಹಾರ […]

ವರುಣನ ಅಬ್ಬರ ತಗ್ಗಿದರೂ ಮುಗಿಯದ ಅವಾಂತರಗಳು, ನದಿ ಪಾತ್ರದ ಜನರಲ್ಲಿ ಆತಂಕ

ಬೆಂಗಳೂರು, ಆ.12- ರಾಜ್ಯದಲ್ಲಿ ಮಳೆಯ ಅಬ್ಬರ ತಪ್ಪಿದರೂ ಉಕ್ಕಿ ಹರಿಯುತ್ತಿರುವ ಜಲಾಶಯಗಳಿಂದ ಪ್ರವಾಹದ ಭೀತಿ ಎದುರಾಗಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವ ಹಾಗೆ ಮಳೆ ಪ್ರಮಾಣ ರಾಜ್ಯದಲ್ಲಿ ತಗ್ಗಿದರೂ ಮಳೆಯ ಅವಾಂತರಗಳು ಮಾತ್ರ ಹೆಚ್ಚಾಗಿವೆ. ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಜಿಲ್ಲೆಯ ಕಡೂರು ತಾಲ್ಲೂಕಿನ ಐತಿಹಾಸಿಕ ಮದಗದ ಕೆರೆ ಏರಿಯಲ್ಲಿ ಭೂ ಕುಸಿತ […]

ಭಾರೀ ಮಳೆಯಿಂದ ಹೊಲ-ಗದ್ದೆ ಜಲಾವೃತ, ಕಂಗಾಲಾದ ರೈತ

ಬೆಂಗಳೂರು,ಆ.9- ಕರಾವಳಿ, ಮಲೆನಾಡು ಹೊರತುಪಡಿಸಿ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಮಳೆ ಅಬ್ಬರ ತಗ್ಗಿದೆ. ಆದರೆ ಬಹುತೇಕ ಕೆರೆಕಟ್ಟೆ, ನದಿ, ಜಲಾಶಯಗಳು ಭರ್ತಿಯಾಗಿರುವುದರಿಂದ ನದಿಪಾತ್ರದಲ್ಲಿ ಪ್ರವಾಹ ಉಂಟಾಗಿ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ತುಂಬಳ್ಳಿಪುರದಲ್ಲಿ ಕಾಫಿ ತೋಟ ನಾಶವಾಗಿದೆ. ಕೊಪ್ಪ-ಶೃಂಗೇರಿ ಹೆದ್ದಾರಿಯ ಉಳುಮೆ ಎಂಬಲ್ಲಿ ಬಿರುಕು ಕಾಣಿಸಿಕೊಂಡು ಕುಸಿಯುವ ಭೀತಿ ಎದುರಾಗಿದೆ. ರಾಯಚೂರು, ಕಲಬುರಗಿಯಲ್ಲಿ ಅತಿವೃಷ್ಟಿ ಉಂಟಾಗಿದೆ. ಭದ್ರಾವತಿ ತಾಲ್ಲೂಕಿನ ಕಾಚಿಗೊಂಡನಹಳ್ಳಿಯಲ್ಲಿ ಮನೆ […]

ರಾಜ್ಯ ಸರ್ಕಾರದಿಂದ 500 ಕೋಟಿ ರೂ. ಅತಿವೃಷ್ಠಿ ಪರಿಹಾರ ಬಿಡುಗಡೆ

ಹಾಸನ,ಆ.5- ರಾಜ್ಯಾದ್ಯಾಂತ ನಿರಂತರವಾಗಿ ಸುರಿಯುತ್ತಿರುವ ಮಳೆ ಜನ ಜೀವನ ಅಸ್ತವ್ಯಸ್ತಗೊಳಿಸಿದ್ದು, ಅತಿವೃಷ್ಠಿ ಪರಿಹಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 500 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರೊಂದಿಗೆ ಶ್ರವಣಬೆಳಗೊಳದಲ್ಲಿ ಮಳೆಯಿಂದ ಹಾನಿಗೀಡಾಗಿರುವ ವಿಂದ್ಯಗಿರಿ ಬೆಟ್ಟ, ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಕೋಪ ನಿರ್ವಹಣೆಗೆ ಹಣದ ಕೊರತೆ ಎಲ್ಲೂ ಬಾರದಂತೆ ನೋಡಿಕೊಂಡಿದ್ದೇವೆ. ಕಂದಾಯ ಇಲಾಖೆಯಲ್ಲಿ ಹೊಸ ನೀತಿ ಜಾರಿಗೆ ತಂದು, […]

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ, ಪ್ರವಾಹ ಭೀತಿ

ಬೆಂಗಳೂರು,ಆ.5- ಮಳೆಯ ಅಬ್ಬರ ಮುಂದುವರೆದಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕಳೆ ದೊಂದು ವಾರದಲ್ಲಿ ರಾಜ್ಯದ ಒಳನಾಡಿನಲ್ಲಿ ಶೇ.500ರಷ್ಟು ಅಧಿಕ ಮಳೆಯಾಗಿ ದಾಖಲೆ ನಿರ್ಮಿಸಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿದರೆ ಉಳಿದೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿದಿದ್ದು, ಹೊಲಗದ್ದೆಗಳು ಜಲಾವೃತಗೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಕಾವೇರಿ ಕೊಳ್ಳದಲ್ಲಿ ಅಕ ಮಳೆಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮಂಡ್ಯ […]

ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ತರಾಟೆ

ಬಾಗಲಕೋಟೆ, ಜು.15- ಬಾದಾಮಿಯ ಕುಳಗೇರಿ ಕ್ರಾಸ್ ಡಾಬಾ ಬಳಿ ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಕುಟುಂಬಕ್ಕೆ ಹಣ ನೀಡಿ ಸಂತೈಸಲು ಬಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಸ್ಥಳೀಯ ಶಾಸಕ ಸಿದ್ದರಾಮಯ್ಯಅವರನ್ನುತರಾಟೆಗೆ ತೆಗೆದುಕೊಂಡು ನೀಡಿದ ಹಣವನ್ನು ಅವರ ವಾಹನದ ಮೇಲೆ ಎಸೆದಿರುವ ಘಟನೆ ನಡೆದಿದೆ. ಹಲ್ಲೇಯಲ್ಲಿ ಗಾಯಗೊಂಡಿದ್ದ ಮಹಮ್ಮದ್ ಹನೀಫ್ ಸೇರಿದಂತೆ ನಾಲ್ವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ ತಲಾ 50 ಸಾವಿರ ಹಣವನ್ನು ವೈಯಕ್ತಿಕವಾಗಿ ನೀಡಿದರು. ಘಟನೆ ನಡೆದು ಇಷ್ಟು ದಿನ ಕಳೆದರೂ ಯಾರೂ ಬಂದು ನಮ್ಮ ಕಷ್ಟವನ್ನು […]

ರಾಜ್ಯಾದ ನೆರೆಪೀಡಿತ ಪ್ರದೇಶಗಳಿಗೆ 500 ಕೋಟಿ ಪರಿಹಾರ ಬಿಡುಗಡೆ : ಸಿಎಂ

ಮಂಗಳೂರು,ಜು.13- ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ತುರ್ತಾಗಿ ಪರಿಹಾರ ಕಾರ್ಯ ಕೈಗೊಳ್ಳಲು ತತ್‍ಕ್ಷಣವೇ 500 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಪಕ ಮಳೆಯಾಗಿ ಅಪಾರ ಪ್ರಮಾಣದ ಹಾನಿ ಉಂಟಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಯಾವ ಯಾವ ಭಾಗದಲ್ಲಿ ಹೆಚ್ಚಿನ ಹಾನಿ ಉಂಟಾಗಿದೆಯೋ ಅಂತಹ ಕಡೆ ಪರಿಹಾರ ಕಾರ್ಯ ಕೈಗೊಳ್ಳಲು 500 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿದರು. […]