ಕಲ್ಪತರು ನಾಡಿಗೂ ಕಾಲಿಟ್ಟ ಧರ್ಮದಂಗಲ್

ತುಮಕೂರು,ಫೆ.2- ಗುಬ್ಬಿ ಶ್ರೀ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಮಹೋತ್ಸವ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಅನ್ಯಕೋಮಿನವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಕರಾವಳಿಯಲ್ಲಿದ್ದ ಧರ್ಮದಂಗಲ್ ಕಲ್ಪತರು ನಾಡಿಗೆ ಕಾಲಿಟ್ಟಿದೆ. ಗುಬ್ಬಿಯಪ್ಪನ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಮುಜರಾಯಿ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನದಲ್ಲಿ ಕಾನೂನಿನಂತೆ ನೂರು ಮೀಟರ್ ವ್ಯಾಪ್ತಿಯೊಳಗೆ ಅನ್ಯ ಧರ್ಮೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮನವಿ ಮಾಡಿವೆ. ಫೆ.4ರಂದು ಘೋಷಿತ ಜೆಡಿಎಸ್ ಅಭ್ಯಥಿಗಳ […]

ರಾಜ್ಯದಲ್ಲಿ ಮತ್ತೆ ಜೋರಾಯ್ತು ಧರ್ಮ ದಂಗಲ್

ಬೆಂಗಳೂರು,ನ.24- ರಾಜ್ಯದಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗುವ ಮುನ್ಸೂಚನೆಗಳು ಗೋಚರಿಸುತ್ತಿವೆ.ರಾಜ್ಯದಲ್ಲಿ ನಡೆಯುವ ದೇವರ ಜಾತ್ರೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಹಿಂದೂ ಧರ್ಮದ ವ್ಯಾಪಾರಸ್ಥರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್‍ಗೌಡ ಧಾರ್ಮಿಕ ದತ್ತಿ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಕಾರ್ತಿಕ ಕಡೆ ಸೋಮವಾರ ನಗರದ […]

ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದು 12 ಮಂದಿ ಸಾವು

ಪಾಟ್ನಾ ನ.21-ದೇವರ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮಕ್ಕಳು -ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿರುವ ಘಟನೆ ವೈಶಾಲಿಯಲ್ಲಿ ನಡೆದಿದೆ. ರಾಜ್ಯ ರಾಜಧಾನಿ ಪಾಟ್ನಾದಿಂದ ಸುಮಾರು 30 ಕಿಮೀ ದೂರದಲ್ಲಿರುವ ವೈಶಾಲಿ ಜಿಲ್ಲೆಯಲ್ಲಿ ರಾತ್ರಿ ಈ ಘಟನೆ ನಡೆದಿದ್ದು,ಸುಮಾರು 40 ಜನರು ಗಾಯಗೊಂಡಿದ್ದಾರೆ ಎಂದು ವೈಶಾಲಿ ಪೊಲೀಸ್ ಅೀಧಿಕ್ಷಕ ಮನೀಶ್‍ ತಿಳಿಸಿದ್ದಾರೆ. ಆಕ್ರೋಷಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ 100ಕ್ಕೂ ಹೆಚ್ಚು ವಾಹನಗಳನ್ನು ದ್ವಂಸಗೊಳಿಸಿದರು ಟೈರ್‍ಗೆ ಬೆಂಕಿ ಹಚ್ಚಿದ […]

ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ, ಮತಾಂತರ ನಿಷೇಧ ಮಸೂದೆ ಮಂಡಿಸಲು ಸಿದ್ಧತೆ

ಬೆಂಗಳೂರು,ಆ.6- ವಿಧಾನಪರಿಷತ್‍ನಲ್ಲಿ ಆಡಳಿತಾರೂಢ ಬಿಜೆಪಿಗೆ ಪೂರ್ಣ ಬಹುಮತ ಲಭಿಸಿರುವ ಕಾರಣ ಮುಂಬರುವ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವತಂತ್ರ ಹಕ್ಕು ಸಂರಕ್ಷಣಾ( ಮತಾಂತರ ನಿಷೇಧ) ಮಸೂದೆಯನ್ನು ಮಂಡಿಸಲು ತೀರ್ಮಾನಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಮೇಲ್ಮನೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಿಧಾನಪರಿಷತ್‍ನ ಒಟ್ಟು 75 ಸದಸ್ಯ ಬಲದಲ್ಲಿ ಬಿಜೆಪಿಗೆ 40 ಸ್ಥಾನಗಳು ಇರುವುದರಿಂದ ಮುಂಬರುವ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಮಂಡಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲು ತೀರ್ಮಾನಿಸಿದೆ. ಕಳೆದ […]