ರಾಹುಲ್ ಗಾಂಧಿಯನ್ನು ಕಾಂಗ್ರೆಸ್‍ನಿಂದ ಉಚ್ಛಾಟಿಸುವಂತೆ ಬಿಜೆಪಿ ಆಗ್ರಹ

ನವದೆಹಲಿ,ಡಿ.17- ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿಯನ್ನು ಎಐಸಿಸಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಕ್ಷಣವೇ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ರಾಹುಲ್‍ಗಾಂಧಿ ವಿರುದ್ಧ ಉಗ್ರವಾದ ಟೀಕೆಗಳನ್ನು ಮುಂದುವರೆಸಿರುವ ಬಿಜೆಪಿ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‍ನ ರಿಮೋಟ್ ಕಂಟ್ರೋಲ್ ಅಧ್ಯಕ್ಷರಲ್ಲ ಮತ್ತು ಪ್ರತಿಪಕ್ಷಗಳು ದೇಶದ ಜೊತೆ ನಿಲ್ಲಲಿವೆ ಎಂಬುದು ಸಾಬೀತುಪಡಿಸಬೇಕಾದರೆ ತಕ್ಷಣವೇ ರಾಹುಲ್‍ಗಾಂಧಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಆಗ್ರಹಿಸಿದೆ. ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ರಾಹುಲ್‍ಗಾಂಧಿ ನಿನ್ನೆ ರಾಜಸ್ಥಾನದ ಜೈಪುರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಚೀನಾ ಭಾರತದ […]