ಅಕ್ರಮ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು NR ರಮೇಶ್ ಆಗ್ರಹ

ಬೆಂಗಳೂರು, ನ.21- ಬಿಬಿಎಂಪಿ ವ್ಯಾಪ್ತಿಯ ಮತ ದಾರರ ಪಟ್ಟಿಗೆ ಅಕ್ರಮವಾಗಿ ಸೇರ್ಪಡೆ ಮಾಡಿರುವ ಒಂದೂವರೆ ಲಕ್ಷಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಈ ಕೂಡಲೆ ತೆಗೆದು ಹಾಕಲು ಕ್ರಮ ಕೈಗೊಳ್ಳ ಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್. ಆರ್.ರಮೇಶ್ ಅವರು ಒತ್ತಾಯಿಸಿದ್ದಾರೆ. ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರಿಗೆ ಪತ್ರ ಬರೆದಿರುವ ಅವರು […]