ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸೀಮಿತ ಸಂಖ್ಯೆಯಲ್ಲಿ ಜನರಿಗೆ ಅವಕಾಶ

ನವದೆಹಲಿ,ಜ.19- ಕೋವಿಡ್-19 ಪರಿಸ್ಥಿತಿಯಿಂದಾಗಿ ಈ ವರ್ಷ ಗಣರಾಜ್ಯೋತ್ಸವದ ಪರೇಡ್‍ಗೆ ಹಾಜರಾಗುವವರ ಸಂಖ್ಯೆಯನ್ನು ಸುಮಾರು 5,000-8,000ಕ್ಕೆ ಸೀಮಿತಗೊಳಿಸುವ ಸಾಧ್ಯತೆಯಿದೆ. ಕಟ್ಟಡ ಕಾರ್ಮಿಕರು, ಮುಂಚೂಣಿಯ ಆರೋಗ್ಯ ಕಾರ್ಯಕರ್ತರು ಮತ್ತು ಇತರರಿಗೆ ಆಸನಗಳನ್ನು ಮೀಸಲಿಡಲಾಗಿದೆ ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಕಾರಿಗಳು ಹೇಳಿದ್ದಾರೆ. ಎರಡು ಬಾರಿ ಲಸಿಕೆ ಹಾಕಿದ ವಯಸ್ಕರು ಮತ್ತು ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ತೆಗೆದುಕೊಂಡ 15 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ಪ್ರವೇಶಿಸಲು ಅನುಮತಿಸಲಾಗುವುದು, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಸಮಾರಂಭಕ್ಕೆ ಹಾಜರಾಗಲು ಅನುಮತಿ […]