ರಾಷ್ಟ್ರ ನಿರ್ಮಾಣದ ಕಡೆಯೂ ರಾಜ್ಯದ ಜನತೆ ಗಮನ ಕೊಡಬೇಕಾದ ಅಗತ್ಯವಿದೆ : ಸಿಎಂ

ಬೆಂಗಳೂರು,ಜ.26-ರಾಜ್ಯದ ಜನತೆ ರಾಷ್ಟ್ರ ನಿರ್ಮಾಣದ ಕಡೆಯೂ ಗಮನ ಕೊಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಗಣರಾಜ್ಯೋತ್ಸವ ಕಾರ್ಯಕ್ರಮದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ದೇಶ ಪ್ರಜಾಪ್ರಭುತ್ವ ತಳಹದಿ ಮೇಲೆ ಗಣರಾಜ್ಯವಾಗಿದೆ. ರಾಷ್ಟ್ರ ನಿರ್ಮಾಣದ ಕಡೆಯೂ ಜನತೆ ಗಮನಹರಿಸಬೇಕೆಂದು ಮನವಿ ಮಾಡಿದರು. ದೇಶ ಮೊದಲು ಎಂಬುದು ಪ್ರತಿಯೊಬ್ಬರಲ್ಲೂ ಬರಬೇಕು. ರಾಷ್ಟ್ರ ನಿರ್ಮಾಣದ ಕಡೆ ವಿಶೇಷವಾಗಿ ಯುವಕರು ಗಮನಹರಿಸಬೇಕು. ಈ ದೇಶವು ನಮಗೆ ಬಹಳಷ್ಟು ಹಕ್ಕುಗಳನ್ನು ಕೊಟ್ಟಿದೆ. ಅದನ್ನು ನಿರ್ವಹಣೆ ಮಾಡುವುದು ನಮ್ಮ ಜವಾಬ್ದಾರಿ […]

ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣದ ಹೈಲೈಟ್ಸ್

ಬೆಂಗಳೂರು,ಜ.26-ಪ್ರಸ್ತುತ ಕೋವಿಡ್ 3ನೇ ಅಲೆ ಎದುರಾಗಿದ್ದು, ಎಲ್ಲರ ಆರೋಗ್ಯದ ಹಿತಕ್ಕಾಗಿ ಪ್ರತಿಯೊಬ್ಬರೂ ಭೌತಿಕ ಅಂತರ, ಮುಖ ಗವಸು ಹಾಗೂ ಸಾನಿಟೈಸರ್ ಬಳಕೆಯ(ಎಸ್‍ಎಂಎಸ್) ಎಂಬ ಮೂರು ಮಂತ್ರಗಳನ್ನು ಪಾಲಿಸಬೇಕೆಂದು ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ನಮಗೆ ಎದುರಾಗಿರುವ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ನಿಭಾಯಿಸಬೇಕು. ಯಾವುದೇ ರೀತಿಯಲ್ಲೂ ಅಲಕ್ಷ್ಯ ಮಾಡುವುದು ಸರಿಯಲ್ಲ. ನಿಮ್ಮ ಹಾಗೂ ಬೇರೊಬ್ಬರ ಆರೋಗ್ಯದ ದೃಷ್ಟಿಯಿಂದ ಮೂರು ಮಂತ್ರಗಳನ್ನು ನಿರಂತರವಾಗಿ ಪಾಲಿಸುವ ಮೂಲಕ ಕೋವಿಡ್ ವಿರುದ್ದ ಹೋರಾಟ ಮಾಡಬೇಕೆಂದು ಮನವಿ ಮಾಡಿದರು. […]