ಅಧಿವೇಶನ ಹಿನ್ನೆಲೆಯಲ್ಲಿ ಬಿಜೆಪಿ ಸಮಾವೇಶಗಳ ದಿನಾಂಕ ಬದಲಾವಣೆ

ಬೆಂಗಳೂರು,ಡಿ.2- ಡಿಸೆಂಬರ್ 19ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಜನಸಂಕಲ್ಪ ಯಾತ್ರೆ ಹಾಗೂ ಮೋರ್ಚಾಗಳ ಸಮಾವೇಶದ ದಿನಾಂಕವನ್ನು ಮರುನಿಗದಿಪಡಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಈ ಸಂಬಂಧ ಡಿಸೆಂಬರ್ 5 ರಂದು ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತದೆ. ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ನಡೆಯಲಿರುವ ಸಭೆಯಲ್ಲಿ ಮೈಸೂರಿನಲ್ಲಿ ನಡೆಯಬೇಕಿದ್ದ ಎಸ್ಸಿ ಮೋರ್ಚಾ ಸಮಾವೇಶವನ್ನು ಚಿತ್ರದುರ್ಗಕ್ಕೆ ಸ್ಥಳಾಂತರ ಮಾಡುವ ಕುರಿತು […]