ಅಭಿವೃದ್ಧಿಯೇ ಡಬಲ್ ಇಂಜಿನ್ ಸರ್ಕಾರದ ಪರಮ ಗುರಿ: ಮೋದಿ

ಚಿಕ್ಕಬಳ್ಳಾಪುರ,ಮಾ.25- ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ. ಬಡವರ ಅಭಿವೃದ್ಧಿಯೇ ಬಿಜೆಪಿಯ ಪರಮೋಚ್ಛ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನುಲೋಕಾರ್ಪಣೆ ಮಾಡಿದ ಬಳಿಕ ಜನತೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮೊದಲಿಗೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿಗಳು, ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಹೇಳುತ್ತಾ, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯನ್ನು […]

ಕೃಷಿ ಸುಧಾರಣೆಗೆ ಡಿಜಿಟಲ್ ವಿಶ್ವವಿದ್ಯಾಲಯದ ಜೊತೆ ಒಪ್ಪಂದ

ತಿರುವನಂತಪುರಂ,ಮಾ.4- ಕೃಷಿಯ ಡಿಜಿಟಲ್ ರೂಪಾಂತರಕ್ಕೆ ಭಾರೀ ಪ್ರಮಾಣದಲ್ಲಿ ಉತ್ತೇಜನವನ್ನು ನೀಡುವ ನಿಟ್ಟಿನಲ್ಲಿ ಕೃಷಿ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ ಸ್ಥಾಪಿಸಲು ದೇಶದ ಮೊದಲ ಡಿಜಿಟಲ್ ವಿಶ್ವವಿದ್ಯಾನಿಲಯ ಮತ್ತು ಐಸಿಎಆರ್‍ನ ಸೆಂಟ್ರಲ್ ಟ್ಯೂಬರ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (ಸಿಟಿಸಿಆರ್‍ಐ) ಪರಸ್ಪರ ಸಹಯೋಗ ವ್ಯಕ್ತಪಡಿಸಿವೆ. ದೇಶಾದ್ಯಂತ ಕೃಷಿ ಉತ್ಪನ್ನಗಳ ಮೌಲ್ಯವರ್ದನೆ ಮತ್ತು ನಿರಂತರವಾಗಿ ಕಾಡುವ ಸಮಸ್ಯೆಗಳನ್ನು ಪರಿಹರಿಸಲು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಎರಡು ಸಂಸ್ಥೆಗಳು ತಮ್ಮ ಪರಿಣತಿಯನ್ನು ಬಳಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡಲಿವೆ. ಕೃಷಿ ಅಭಿವೃದ್ಧಿ ಯೋಜನೆಗಳು ಮತ್ತು ವಿದ್ಯಾರ್ಥಿಗಳ ಜಂಟಿ […]

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ಥಳ ಮಂಜೂರು

ಬೆಂಗಳೂರು ಫೆ.7- ಕೇಂದ್ರ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿದ 15 ವರ್ಷಗಳ ಬಳಿಕ ಮೈಸೂರಿನ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಶಾಶ್ವತ ಸ್ಥಳವನ್ನು ಮಂಜೂರು ಮಾಡಲು ನಿರ್ಧರಿಸಿದೆ.ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿರುವ ಜಯಲಕ್ಷ್ಮೀ ವಿಲಾಸ ಭವನಕ್ಕೆ ಕೇಂದ್ರವನ್ನು ಸ್ಥಳಾಂತರಿಸಲಾಗುತ್ತದೆ. ಮೈಸೂರು ವಿಶ್ವವಿದ್ಯಾನಿಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡುವಿನ ತಿಳುವಳಿಕೆ ಒಪ್ಪಂದದ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮತ್ತೆ ರೆಪೊ ದರ ಏರಿಸಿದ […]

ಬೆಂಗಳೂರಿನ ಐಐಎಸ್‍ಸಿ ದೇಶದಲ್ಲೇ ಅತ್ಯುತ್ತಮ ವಿಶ್ವವಿದ್ಯಾಲಯ

ನವದೆಹಲಿ,ಜು.15- ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟದ ಅಧ್ಯಯನ ವರದಿಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರಪ್ರದಾನ್ ಇಂದು ಬಿಡುಗಡೆ ಮಾಡಿದ್ದು, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ವವಿದ್ಯಾಲಯ ದೇಶದಲ್ಲಿ ಉನ್ನತ ಸ್ಥಾನ ಪಡೆದಿದೆ. ಸತತವಾಗಿ ನಾಲ್ಕನೆ ವರ್ಷವೂ ರ್ಯಾಂಕಿಂಗ್ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ರ್ಯಾಂಕಿಂಗ್‍ನಲ್ಲಿ ಐಐಟಿ ಮದ್ರಾಸ್ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಐಐಎಸ್‍ಸಿ ದ್ವಿತೀಯ, ಬಾಂಬೆಯ ಐಐಟಿ ತೃತೀಯ ಸ್ಥಾನದಲ್ಲಿವೆ. ವಿಶ್ವವಿದ್ಯಾಲಯಗಳ ರ್ಯಾಂಕಿಂಗ್‍ನಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಎರಡನೇ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಕೀರ್ತಿಗೆ […]