ಜಂತರ್ಮಂತರ್ನಲ್ಲಿ ಕೆ.ಕವಿತಾ ಉಪವಾಸ ಸತ್ಯಾಗ್ರಹ

ನವದೆಹಲಿ,ಮಾ.10-ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವಂತೆ ಒತ್ತಾಯಿಸಿ ಭಾರತ್ ರಾಷ್ಟ್ರ ಸಮಿತಿ ಪಕ್ಷದ ಹಿರಿಯ ನಾಯಕಿ ಕೆ.ಕವಿತಾ ಅವರು ಜಂತರ್ಮಂತರ್ನಲ್ಲಿ ಇಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೆ ಅವರು ಪ್ರತಿಭಟನೆಯ ಹಾದಿ ಹಿಡಿದಿರುವುದು ಕುತೂಹಲ ಕೆರಳಿಸಿದೆ. ಈದ್ಗಾ […]