ಸರ್ಕಾರಿ ಹುದ್ದೆಗಳ ಎಲ್ಲ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ

ಬೆಂಗಳೂರು,ಆ.16- ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಮಾದರಿಯಲ್ಲಿ ಸರ್ಕಾರಿ ಹುದ್ದೆಗಳ ಎಲ್ಲ ನೇಮಕಾತಿಗಳಲ್ಲೂ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ನೀಡುವ ನಿರ್ಣಯವನ್ನು ಶೀಘ್ರವೇ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಣೆ ಮಾಡಿದರು. ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ಯುವಜನ ಕ್ರೀಡಾ ಇಲಾಖೆ ವತಿಯಿಂದ ನಡೆದ ಕಾಮನವೆಲ್ತ್- 2022 ಕ್ರೀಡಾಕೂಟದಲ್ಲಿ ಭಾಗವಹಿಸಿದ ಮತ್ತು ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸನ್ಮಾನ ಸಮಾರಂಭ ಹಾಗೂ ಅಮೃತ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟುಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗಾಗಲೇ ಪೊಲೀಸ್ […]