ನಿವೃತ್ತ ಐಪಿಎಸ್ ಅಧಿಕಾರಿ ನಾರಾಯಣಗೌಡ ವಿಧಿವಶ

ಬೆಂಗಳೂರು,ಜ.30- ನಿವೃತ್ತ ಐಪಿಎಸ್ ಅಧಿಕಾರಿ ಎಂ.ಸಿ.ನಾರಾಯಣ ಗೌಡ(69) ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಮೃತರು ಪುತ್ರರಾದ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಮತ್ತು ಎಂ.ಎನ್.ಅಭಿಷೇಕ್ ಹಾಗೂ ಪತ್ನಿ ಚಂದ್ರಮತಿ ನಾರಾಯಣ ಗೌಡ ಅವರನ್ನು ಅಗಲಿದ್ದಾರೆ. ಪಾರ್ಥೀವ ಶರೀರವನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಅವರ ಹುಟ್ಟೂರಾದ […]