ದೇವೇಗೌಡರು ಅಡಿಗಲ್ಲಿಟ್ಟ ಕಾಮಗಾರಿಗೆ ಮರು ನಾಮಕರಣ : ರೇವಣ್ಣ ಆಕ್ಷೇಪ

ಹಾಸನ, ಮಾ.9- ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಅಡಿಗಲ್ಲಿಟ್ಟ ವಿಮಾನ ನಿಲ್ದಾಣ ಕಾಮಗಾರಿಗೆ ಪುನಃ ಅಡಿಗಲ್ಲಿಡಲು ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆಕ್ಷೇಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕಗಳ ಹಿಂದೆಯೇ ಭುವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿಗೆ ದೇವೇಗೌಡರು ಗುದ್ದಲಿ ಪೂಜೆ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಅಡಿಗಲ್ಲಿಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾ.13ರಂದು ಆಗಮಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಜೆಡಿಎಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳಿಗೆ […]