‘ಶೀಘ್ರದಲ್ಲೇ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ’

ಬೆಂಗಳೂರು,ಮಾ.7-ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಸಂಗಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಭದ್ರಾವತಿ ತಾಲ್ಲೂಕಿನಲ್ಲಿ ಖಾಲಿ ಇರುವ ಕೆಲವು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಸರ್ಕಾರ ಕಾರ್ಯೋನ್ಮುಖವಾಗಿದೆ. ಯಾವ ಯಾವ ಹುದ್ದೆಗಳು ಖಾಲಿ ಇವೆಯೋ ಅವುಗಳನ್ನು ಭರ್ತಿ ಮಾಡಿಕೊಳ್ಳಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಭದ್ರಾವತಿಗೆ ತಹಸೀಲ್ದಾರ್ ಗ್ರೇಡ್-1 […]