ಶಬರಿ ಮಲೈಗೆ ಹರಿದು ಬಂದ ಭಕ್ತ ಸಾಗರ, 225 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ

ಬೆಂಗಳೂರು,ಡಿ.28- ಕಳೆದ ಎರಡು ವರ್ಷದಿಂದ ಕೊರೊನಾ ಕಾರಣದಿಂದಾಗಿ ಪ್ರಸಿದ್ದ ಯಾತ್ರ ಸ್ಥಳ ಶಬರಿಮಲೆಗೆ ವಿರಳವಾಗಿದ್ದ ಜನ ಈ ವರ್ಷ ಅಪಾರ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಇದರಿಂದ ಕೇವಲ ಒಂದು ತಿಂಗಳ ಸಮಯದಲ್ಲಿ ಸುಮಾರು 225 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಕಳೆದ ಸುಮಾರು 39 ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಿದ್ದಾರೆ. ಡಿಸೆಂಬರ್ 25ರವರೆಗೆ ಶಬರಿಮಲೆಗೆ ಯಾತ್ರೆ ಕೈಗೊಂಡಿರುವವರ ಜೊತೆ ಹಾಗೆಯೇ ಭೇಟಿ ನೀಡಿದ ಭಕ್ತರ ಸಂಖ್ಯೆ ಸುಮಾರು […]

ರಾಜ್ಯ ಜಿಎಸ್‍ಟಿ ಸಂಗ್ರಹ ಕುಸಿತ

ಬೆಂಗಳೂರು,ಡಿ.12- ದೇಶದಲ್ಲೇ ಒಟ್ಟು ಜಿಎಸ್‍ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಈ ಸಾಲಿನಲ್ಲಿ ನವೆಂಬರ್‍ ವರೆಗೆ ಸಂಗ್ರಹಿಸಿದ ರಾಜ್ಯ ಜಿಎಸ್‍ಟಿ ಕಳೆದ ವರ್ಷಕ್ಕೆ ಹೋಲಿಸಿದರೆ ಕುಸಿತ ಕಂಡಿದೆ. ನಿರೀಕ್ಷೆಗೂ ಮೀರಿ ಒಟ್ಟು ಜಿಎಸ್‍ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇತ್ತ ರಾಜ್ಯದ ಬೊಕ್ಕಸ ತುಂಬಿಸುವಲ್ಲಿ ಜಿಎಸ್‍ಟಿ ಹಾಗೂ ತೈಲ ಮೇಲಿನ ಕರ್ನಾಟಕ ಮಾರಾಟ ತೆರಿಗೆ ಗಣನೀಯ ಪಾಲು ಹೊಂದಿದೆ. ರಾಜ್ಯ ಸರ್ಕಾರ ಈ ಬಾರಿ ನಿರೀಕ್ಷೆಗಿಂತ ಹೆಚ್ಚಿಗೆ ಆದಾಯ ಸಂಗ್ರಹ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದ […]

ಕಂದಾಯ ಇಲಾಖೆ ಕಚೇರಿಗಳಲ್ಲಿ ಅಕ್ರಮ, ಲೋಕಾಯುಕ್ತ ತನಿಖೆ ಆರಂಭ

ಬೆಂಗಳೂರು,ಅ.22- ಬೆಂಗಳೂರು ಕಂದಾಯ ಇಲಾಖೆ ಕಚೇರಿಗಳಲ್ಲಿ ಅಕ್ರಮ ಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕೊಂಡಿರುವ ಲೋಕಾಯುಕ್ತ ನ್ಯಾಯ ಮೂರ್ತಿ ಬಿ.ಎಸ್. ಪಾಟೀಲ ಅವರು ವಿಚಾರಣೆ ಆರಂಭಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳ ಅಧಿಕಾರಿಗಳ ಜಂಟಿ ತಂಡಗಳು ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ಬೆಂಗಳೂರು ದಕ್ಷಿಣ ಮತ್ತು ಉತ್ತರ ಉಪ ವಿಭಾಗಾಧಿಕಾರಿಗಳ ಕಚೇರಿಗಳು, ಉತ್ತರ, ದಕ್ಷಿಣ, ಪೂರ್ವ, ಯಲಹಂಕ ಮತ್ತು ಆನೇಕಲ್ ತಾಲ್ಲೂಕು ಕಚೇರಿಗಳಲ್ಲಿ ಸೆಪ್ಟೆಂಬರ್ 27ರಂದು ದಿಢೀರ್ ತಪಾಸಣೆ ಮಾಡಿದ್ದವು. ಕಾವೇರಿ ಜಲಾನಯನ […]

ಈದ್ಗಾ ಮೈದಾನ ಸರ್ಕಾರಿ ಆಸ್ತಿ ಎಂದು ಘೋಷಣೆ, ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ

ಬೆಂಗಳೂರು, ಆ.7- ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಆದೇಶ ಹೊರಡಿಸುತ್ತಿದ್ದಂತೆ ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜಪೇಟೆಯ ನಾಗರಿಕರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಇಂದು ಮೈದಾನದ ಬಳಿ ಸಮಾವೇಶಗೊಂಡು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಾಗರಿಕ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಬೀದಿಬದಿ ವ್ಯಾಪಾರಿಗಳು ಎಲ್ಲರೂ ಇಂದು ಸರ್ಕಾರಕ್ಕೆ ಮತ್ತು ಬಿಬಿಎಂಪಿಗೆ ಕೃತಜ್ಞತೆ ಸಲ್ಲಿಸಿದರು. ಬಹಳ ದಿನಗಳಿಂದ ಈ […]

ಅಕ್ರಮ-ಸಕ್ರಮ ಜಾರಿ : 20 ಸಾವಿರ ಕೋಟಿ ಆದಾಯ ನಿರೀಕ್ಷೆ

ಬೆಂಗಳೂರು,ಆ.5- ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಮುಂದೂಡಿಕೆಯಾಗುತ್ತಿದ್ದ ಬಹುನಿರೀಕ್ಷೀತ ಅಕ್ರಮ – ಸಕ್ರಮ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಅಂದಾಜು 20 ಸಾವಿರ ಕೋಟಿ ಆದಾಯ ಬರುವ ಸಂಭವವಿದೆ. ಮುಂಬರುವ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕರ್ನಾಟಕ ನಗರ ಪಾಲಿಕೆ ಕಟ್ಟಡಗಳ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿ ನಂತರ ರಾಜ್ಯಪಾಲರ ಅಂಕಿತ ಬಿದ್ದ ಬಳಿಕ ಇದು ಜಾರಿಯಾಗಲಿದೆ. ಬಿಬಿಎಂಪಿ ಸೇರಿ ರಾಜ್ಯಾದ್ಯಂತ ಕಂದಾಯ ಭೂಮಿಯಲ್ಲಿ ಅನಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅಕ್ರಮ -ಸಕ್ರಮ ಯೋಜನೆ ಶೀಘ್ರ ಜಾರಿಯಾಗುವ ನಿರೀಕ್ಷೆ […]

ವಿಧಾನಸಭೆ ಚುನಾವಣೆಗೂ ಮುನ್ನ ಅಕ್ರಮ-ಸಕ್ರಮ ಜಾರಿ : ಸಚಿವ ಅಶೋಕ್

ಬೆಂಗಳೂರು, ಆ.1- ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ಕಂದಾಯ ನಿವೇಶನಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸಲಾ ಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನಾ ಮಂಜೂರಾತಿ ಇಲ್ಲದೆ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸಲಾಗುವುದು. ಆದರೆ ವಾಣಿಜ್ಯ ಉದ್ದೇಶದ ನಿರ್ಮಾಣಗಳನ್ನು ಸಕ್ರಮ ಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಕ್ರಮ ಮನೆಗಳನ್ನು ಸಕ್ರಮಗೊಳಿಸುವ ಸಂಬಂಧ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಇತ್ಯರ್ಥವಾದ ಕೂಡಲೇ ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿ ಕೊಟ್ಟು ಸಕ್ರಮಗೊಳಿಸಲಾಗುವುದು ಎಂದರು. 40*60 ಅಳತೆಯ ನಿವೇಶನದಲ್ಲಿ ನಿರ್ಮಿಸಿರುವ […]

ದೇಶದ ಆರ್ಥಿಕತೆ ಅತಿಕ್ಷಿಪ್ರ ವೇಗದಲ್ಲಿ ಚೇತರಿಕೆ

ನವದೆಹಲಿ,ಆ.1- ಕೋವಿಡ್ ಬಳಿಕ ದೇಶದ ಆರ್ಥಿಕತೆ ಅತಿಕ್ಷಿಪ್ರ ವೇಗದಲ್ಲಿ ಚೇತರಿಸಿಕೊಳ್ಳುತ್ತಿದ್ದು, ಜಿಎಸ್‍ಟಿ ಜಾರಿಯಾದ ಬಳಿಕ 2ನೇ ಬಾರಿಗೆ ದಾಖಲಾರ್ಹ ಮಟ್ಟದಲ್ಲಿ ಅತಿ ಹೆಚ್ಚು ತೆರಿಗೆ ವಸೂಲಿಯಾಗಿದೆ. ಕಳೆದ ವರ್ಷ ಜುಲೈಗೆ ಹೋಲಿಸಿದರೆ ಈವರೆಗೂ ಇದು ಅತಿಹೆಚ್ಚು ಸಂಗ್ರಹಿತ ತೆರಿಗೆ ಎಂದು ಕೇಂದ್ರ ಸರ್ಕಾರದ ಹಣಕಾಸು ಇಲಾಖೆ ತಿಳಿಸಿದೆ. ಕಳೆದ ಜುಲೈ ತಿಂಗಳಿನಲ್ಲಿ ಒಟ್ಟು 1,48,995 ಕೋಟಿ ಜಿಎಸ್‍ಟಿ ವಸೂಲಿಯಾಗಿದೆ. ಇದರಲ್ಲಿ ಕೇಂದ್ರ ಜಿಎಸ್‍ಟಿ 25,751, ರಾಜ್ಯ ಜಿಎಸ್‍ಟಿ 38,700, ಅಂತಾರಾಷ್ಟ್ರೀಯ ಜಿಎಸ್‍ಟಿ 79,518 ಅದರಲ್ಲಿ 41,420 ಕೋಟಿ […]