ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪವಿಲ್ಲದಂತೆ ನೋಡಿಕೊಳ್ಳಿ : ತುಷಾರ್ ಗಿರಿನಾಥ್

ಬೆಂಗಳೂರು,ಡಿ.20- ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು ಹಾಗೂ ಸೇರ್ಪಡೆ, ರದ್ದತಿ ಹಾಗೂ ಮಾರ್ಪಾಡುಗಳಲ್ಲಿ ಯಾವುದೇ ಲೋಪಗಳಿಲ್ಲದಂತೆ ನೋಡಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತದಾರರ ಪಟ್ಟಿ ಪರಿಷ್ಕರಣೆ, ಹೆಸರು ಸೇರ್ಪಡೆ, ರದ್ದತಿ ಮತ್ತು ಮಾರ್ಪಾಡು ಕುರಿತಂತೆ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುತ್ತಿರುವ ಆಯುಕ್ತರು ರಾಜಾಜಿನಗರದ ಹಲವಾರು ಮನೆಗಳಿಗೆ ಭೇಟಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಸಂಬಂಧಪಟ್ಟ ಅಧಿಕಾರಿಗಳ ಜೊತೆ ರಾಜಾಜಿ […]

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್ ಶ್ರೇಣಿಯ ಅಧಿಕಾರಿಗಳ ನೇಮಕ

ಬೆಂಗಳೂರು, ಡಿ.16- ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆ ಹಗರಣ ಸಂಬಂಧ ಇದೀಗ ಬಿಬಿಎಂಪಿ ಬರೋಬ್ಬರಿ 12 ಕೆಎಎಸ್ ಶ್ರೇಣಿ ಅಧಿಕಾರಿಗಳನ್ನು ನೇಮಿಸಿ ಪರಿಷ್ಕರಣೆ ಪ್ರಕ್ರಿಯೆಗೆ ಮುಂದಾಗಿದೆ. ಈ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಈಗಾಗಲೇ 12 ಕೆಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಮತದಾರರ ಮಾಹಿತಿ ಪರಿಶೀಲನೆಯನ್ನು ಈ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದರು.ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರದಲ್ಲಿ ಮತದಾರರ ಮಾಹಿತಿ ಪರಿಷ್ಕರಣೆ ಆಗುತ್ತಿದೆ. ಜತೆಗೆ ವಾರಕ್ಕೊಮ್ಮೆ ರಾಜಕೀಯ […]

ಮತದಾರರ ಪಟ್ಟಿ ಪರಿಷ್ಕರಣೆಗೆ ನಾಳೆ ವಿಶೇಷ ಅಭಿಯಾನ

ಬೆಂಗಳೂರು,ನ.11- ಮತದಾರರ ಪಟ್ಟಿ ಪರಿಷ್ಕರಣೆಗೆ ನಾಳೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಭಾರತ ಚುನಾವಣಾಆಯೋಗದ ಸೂಚನೆ ಮೇರೆಗೆ ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಡಿ.8ರವರೆಗೆ ಸಾರ್ವಜನಿಕರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಈ ಸಮಯದಲ್ಲಿ ಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪತಿ, ಸ್ಥಳಾಂತರಗೊಂಡ ವಿವರ ನಮೂದಿಸಲುಅರ್ಜಿ ಸಲ್ಲಿಸಬಹುದಾಗಿದೆ. ಈ ರೀತಿ ಮತದಾರರ ಪಟ್ಟಿಯಲ್ಲಿನ ಬದಲಾವಣೆ ಮಾಡಿಕೊಳ್ಳಲು ಇಚ್ಚಿಸುವ ಮತದಾರರಿಗಾಗಿ ನಾಲ್ಕು ದಿನಗಳ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮೊದಲ ಅಭಿಯಾನ ನಾಳೆ ನಡೆಯಲಿದೆ, ನ.20, ಡಿ.3 […]

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾಲ್ನಡಿಗೆ ಜಾಥಾ

ಬೆಂಗಳೂರು,ನ.9- ಮತದಾರರ ಪಟ್ಟಿ ಪರಿಷ್ಕರಣೆ-2023 ಭಾಗವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ನೇತೃತ್ವದಲ್ಲಿ ಕಾಲ್ನಡಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾಲ್ನಡಿಗೆ ಜಾಥಾಥಾ ನಡೆಸಲಾಯಿತು. ನಗರದಲ್ಲಿಂದು ಹಡ್ಸನ್ ವೃತ್ತದ ಕಬ್ಬನ್ ಉದ್ಯಾನದ ಮುಖ್ಯ ದ್ವಾರದಿಂದ ಕಾಲ್ನಡಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾಲ್ನಡಿಗೆ ಜಾಥಾಥವು ಕಬ್ಬನ್ ಉದ್ಯಾನದ ಮುಖ್ಯ ದ್ವಾರದಿಂದ, ಸೆಂಟ್ರಲ್ ಗ್ರಂಥಾಲಯ, ಹೈಕೋರ್ಟ್, ವಿಧಾನಸೌಧ ರಸ್ತೆ, ಪ್ರೆಸ್ ಕ್ಲಬï, ಕಬ್ಬನ್ ಉದ್ಯಾನದ ಮೂಲಕ ಬಾಲಭವನದವರೆಗೆ ನಡೆಯಿತು. ಮತದಾರರ ಪಟ್ಟಿ ಪರಿಷ್ಕರಣೆಕಾಲ್ನಡಿಗೆ ಜಾಥಾಥದಲ್ಲಿ ಬಿಬಿಎಂಪಿ ಕಚೇರಿ […]

ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಪರಿಷ್ಕರಣೆ

ಬೆಂಗಳೂರು,ಸೆ.16-ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2016ರಲ್ಲಿ ವೇತನ ಪರಿಷ್ಕರಣೆಯಾಗಿದೆ. ಆನಂತರ ಪರಿಷ್ಕರಣೆಯಾಗಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದೆ. 2021ರಲ್ಲಿ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಿದ್ದರು. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ […]