ಭಯೋತ್ಪಾದಕರ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ

ಜಮ್ಮು,ಫೆ.8- ಧಾಂಗ್ರಿ ಗ್ರಾಮದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ರಜೌರಿ ಜಿಲ್ಲೆಯಲ್ಲಿ ಅಡಗಿಕೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದು, ಅವರ ಬಗ್ಗೆ ಮಾಹಿತಿ ನೀಡುವವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಮಂಗಳವಾರ ರಾತ್ರಿ ಹೊರಡಿಸಿರುವ ಪ್ರಕಟಣೆಯಲ್ಲಿ, ಭಯೋತ್ಪಾದಕರಿಗೆ ಸಹಾಯ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜನವರಿ 1 ರಂದು ರಾಜೌರಿಯ ಧಾಂಗ್ರಿ ಗ್ರಾಮದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ, ಏಳು ಜನರನ್ನು ಹತ್ಯೆ ಮಾಡಿದ್ದರು, 14 ಮಂದಿ […]
ಪ್ರವೀಣ್ ನೆಟ್ಟಾರು ಹಂತಕರ ಸುಳಿವು ನೀಡುವವರಿಗೆ 5 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರು,ಜ.20- ಬಿಜೆಪಿ ಯುವ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಗಳಾಗಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್‍ಐನ ಸದಸ್ಯರಾಗಿರುವ ಕೊಡಾಜಿ ಮೊಹಮ್ಮದ್ ಶರೀಫ್ ಮತ್ತು ಮಸೂದ್.ಕೆ.ಎ ಎಂಬುವರ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷದಂತೆ ಬಹುಮಾನ ನೀಡುವುದಾಗಿ ಪ್ರಕಟಿಸಿದೆ. ಆರೋಪಿಗಳ ಸುಳಿವು ಪತ್ತೆಯಾದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್‍ಐಎ ಎಸ್‍ಪಿಗೆ ಮಾಹಿತಿ […]
ಅಮರಾವತಿ ಫಾರ್ಮಸಿಸ್ಟ್ ಹತ್ಯೆಯ ಆರೋಪಿ ಸುಳಿವು ನೀಡಿದವರಿಗೆ 2 ಲಕ್ಷ ಬಹುಮಾನ
ಮುಂಬೈ, ಸೆ.13 – ಅಮರಾವತಿ ಫಾರ್ಮಸಿಸ್ಟ್ ಉಮೇಶ್ ಕೊಲ್ಹೆ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಹೀಂ ಅಹ್ಮದ್ ಫಿರೋಜ್ ಅಹ್ಮದ್‍ನ ಪತ್ತೆಗೆ ಸುಳಿವು ನೀಡಿದವರಿಗೆ 2 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಘೋಷಿಸಿದೆ. ಮಹಾರಾಷ್ಟ್ರದ ಅಮರಾವತಿ ನಗರದ ಜಾಕೀರ್ ಕಾಲೋನಿ ನಿವಾಸಿ ಅಹಮದ್ (22) ವಿರುದ್ದ ಎರಡು ತಿಂಗಳ ಹಿಂದೆ ಪ್ರಕರಣ ದಾಖಲಾದಾಗಿನಿಂದ ಪರಾರಿಯಾಗಿದ್ದಾನೆ. ಅಹ್ಮದ್ ಬಂಧನಕ್ಕೆ ಕಾರಣವಾಗುವ ಯಾವುದೇ ರೀತಿಯ ಮಾಹಿತಿಗಾಗಿ ಎನ್‍ಐಎ 2 ಲಕ್ಷ ರೂಪಾಯಿ ನಗದು […]