ಎಸ್ಡಿಪಿಐನಿಂದ ಕೋಮು ಗಲಭೆ ಸಂಚು : ಸಿಎಂ ಬೊಮ್ಮಾಯಿ
ಬೆಂಗಳೂರು,ಆ.23- ಸೂಕ್ಷ್ಮ ಪ್ರದೇಶವಾಗಿರುವ ಮಡಿಕೇರಿಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಶುಕ್ರವಾರ ಕೋಮುಗಲಭೆ ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಇಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭ ನಡೆಸಲು ಅವಕಾಶ ಕೊಡಬಾರದು ಎಂದುಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಶುಕ್ರವಾರ ಮಡಿಕೇರಿಯಲ್ಲಿ ರಾಜಕೀಯ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿತ್ತು. ಜಿಲ್ಲಾಡಳಿತ ನಾಳೆ ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸಿದೆ. ಇದರ ಬೆನ್ನಲ್ಲೇ ಗುಪ್ತಚರ ವಿಭಾಗವು ಸಿಎಂ ಬೊಮ್ಮಾಯಿ ಅವರಿಗೆ ವರದಿಯೊಂದನ್ನು ನೀಡಿದ್ದು, ಸಾರ್ವಜನಿಕರ ಹಿತರಕ್ಷಣೆ ಹಾಗೂ ಕಾನೂನು […]