ಮಿತಿಮೀರಿದ ಕೋವಿಡ್ ಕೇಸ್, ಚೀನಾದಲ್ಲಿ ರಕ್ತಕ್ಕಾಗಿ ಹಾಹಾಕಾರ

ನವದೆಹಲಿ,ಡಿ.26- ಕೋವಿಡ್ ಸೋಂಕಿನ ಪ್ರಕರಣಗಳ ತೀವ್ರ ಹೆಚ್ಚಳದ ನಡುವೆ ಚೀನಾದಲ್ಲಿ ರಕ್ತದ ಕೊರತೆ ಎದುರಾಗಿರುವುದು ಮತ್ತಷ್ಟು ಆತಂಕಗಳನ್ನು ಸೃಷ್ಟಿಸಿದೆ. ವೈಯಕ್ತಿಕ ಸುರಕ್ಷತೆಯ ಖಾತ್ರಿಯೊಂದಿಗೆ ರಕ್ತ ದಾನ ಮಾಡಲು ಜನ ಮುಂದೆ ಬರಬೇಕು ಎಂದು ಚೀನಾ ಸರ್ಕಾರ ಮನವಿ ಮಾಡಿದೆ. ಕೋವಿಡ್ ಪ್ರಕರಣಗಳು ಹಾಗೂ ಶೀತವಾತಾವರಣದಿಂದ ರಕ್ತದ ಬೇಡಿಕೆ ಹೆಚ್ಚಾಗಿದೆ ಎಂದು ಸರಳವಾಗಿ ವಿಷಯ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆದಿದೆ. ಆದರೆ, ಇದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಕೋವಿಡ್ ರೂಪಾಂತರಿ ಯಾವ ರೀತಿಯಲ್ಲಿದೆ ಎಂದು ಅಂದಾಜಿಸಲು ಕಷ್ಟವಾಗುತ್ತಿದೆ. […]

ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಕರೆಂಟ್ ಶಾಕ್!

ಬೆಂಗಳೂರು,ಡಿ.16- ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಹಲವಾರು ಎಸ್ಕಾಂಗಳು ವಿದ್ಯುತ ದರ ಏರಿಕೆಗೆ ಕೆಇಆರ್‍ಸಿಗೆ ಪ್ರಸ್ತಾವನೆ ಸಲ್ಲಿಸಿರುವುದರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎನ್ನುವಂತಾಗಿದೆ. ಈ ವರ್ಷದಲ್ಲೇ ಈಗಾಗಲೇ ಮೂರು ಬಾರಿ ಕೆಇಆರ್‍ಸಿ ವಿದ್ಯುತ್ ದರ ಏರಿಕೆ ಮಾಡಿದ್ದು, ಈ ಬಾರಿಯೂ ವಿದ್ಯುತ್ ದರ ಪರಿಷ್ಕರಣೆ ಮಾಡಿದರೆ ಮತ್ತೆ ಗ್ರಾಹಕರಿಗೆ ಕರೆಂಟ್ ಶಾಕ್ ಹೊಡೆಯುವುದಂತೂ ಗ್ಯಾರಂಟಿಯಾಗಿದೆ. ಐದು ಎಸ್ಕಾಂಗಳು ವಿದ್ಯುತ್ ದರ ಏರಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿ ಪ್ರತಿ […]

ಕಳೆದ 8 ವರ್ಷದಲ್ಲಿ ದ್ವೇಷಾಧಾರಿತ ಭಾಷಣಗಳ ಪ್ರಮಾಣ ಶೇ.500 ರಷ್ಟು ಹೆಚ್ಚಳ

ನವದೆಹಲಿ, ನ.16- ಕಳೆದ 8 ವರ್ಷಗಳಿಂದ ದೇಶದಲ್ಲಿ ರಾಜಕೀಯ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ದ್ವೇಷಾಧಾರಿತ ಭಾಷಣಗಳ ಪ್ರಮಾಣ ಶೇ. 500 ರಷ್ಟು ಹೆಚ್ಚಾಗಿದೆ ಎಂದು ವರದಿ ಸಲ್ಲಿಸಲಾಗಿದೆ. ಸಚಿವ ಸ್ಥಾನದಂತಹ ಜವಾಬ್ದಾರಿಯಲ್ಲಿರುವವರು ಸೇರಿದಂತೆ ಹಲವಾರು ಮಂದಿ ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಬುಲಂದರೇಶ್ವರದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ವೇಳೆ ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಸಚಿವರೊಬ್ಬರು ರಾಜಕೀಯ ಪ್ರೇರಿತ ಎಂದು ತಳ್ಳಿಹಾಕಿದರು.ಈ ವಿಚಾರಣೆ ವೇಳೆ ಹಲವಾರು ಮಾಹಿತಿಗಳು ಬೆಳಕಿಗೆ ಬಂದಿವೆ. 2014ರ ಮೇ […]

ಬೆಲೆ ಏರಿಕೆ ವಿರುದ್ಧ ಆ.5 ರಂದು ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ

ರಾಯ್ಪುರ,ಆ.3- ನಿರುದ್ಯೋಗ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆ.5ರಂದು ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಮತ್ತು ಸಮಸ್ಯೆಗಳ ಕುರಿತು ಬೆಳಕು ಚೆಲ್ಲಲು ಪ್ರತಿಭಟನೆ ಮೂಲಕ ಪ್ರಧಾನಿ ಹೌಸ್ ಘೇರಾವ್ ಹಾಕಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಛತ್ತೀಶಗಢದಲ್ಲೂ ರಾಜ್ಯ ಕಾಂಗ್ರೆಸಿಗರು ಧರಣಿ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ರಾಯ್‍ಪುರದ […]

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ

ಬೆಂಗಳೂರು, ಜೂ.18- ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್‍ನಾಯಕರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಯು.ಟಿ ಖಾದರ್ ಸೇರಿದಂತೆ ಹಲವರು ಬೆಲೆ ಏರಿಕೆಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಅಚ್ಛೇ ದಿನ ಅಂತಾ ಹೇಳಿಕೊಂಡು ಜನರಿಗೆ ಅನ್ಯಾಯ ಮಾಡಿದ್ದಾರೆ. ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಜನ ಸಾಮಾನ್ಯರು ಸಂಕಷ್ಟ […]