ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು, ಜ.11- ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೆಜಿಹಳ್ಳಿಯ ಪಿ ಅಂಡ್ ಟಿ ಕಾಲೋನಿ ನಿವಾಸಿ ರಿಜ್ವಾನ್(25) ಆತ್ಮಹತ್ಯೆ ಮಾಡಿಕೊಂಡಿರುವ ಎಲ್‍ಎಲ್‍ಬಿ ವಿದ್ಯಾರ್ಥಿ. ರಿಜ್ವಾನ್ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು , ಪತ್ನಿ ಆರ್‍ಟಿ ನಗರದ ತನ್ನ ಪೋಷಕರ ಮನೆಯಲ್ಲಿ ನೆಲೆಸಿದ್ದಾರೆ. ತನ್ನ ವಿದ್ಯಾಭ್ಯಾಸವನ್ನು ರಿಜ್ವಾನ್ ಮುಂದುವರೆಸಿದ್ದನು. ನಿನ್ನೆ ಮಧ್ಯಾಹ್ನ ಮನೆಯ ಮೊದಲನೆ ಮಹಡಿಯಲ್ಲಿರುವ ಶೀಟ್‍ನ ರೂಂನಲ್ಲಿ ಕಬ್ಬಿಣದ ರಾಡಿಗೆ […]