ನಾಳೆಯಿಂದ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಚುರುಕುಗೊಳಿಸುತ್ತೇವೆ : ತುಷಾರ್ ಗಿರಿನಾಥ್
ಬೆಂಗಳೂರು,ಆ.26- ಹಾಳಾಗಿರುವ ನಗರದ ರಸ್ತೆಗಳನ್ನು ನಾಳೆಯಿಂದ ಸಮರೋಪಾದಿಯಲ್ಲಿ ದುರಸ್ತಿಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳೆದ ಮೇ ತಿಂಗಳಿನಲ್ಲಿ 20 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವು. ಆದರೆ, ಇತ್ತಿಚೆಗೆ ಭಾರಿ ಮಳೆಯಾಗುತ್ತಿರುವುದರಿಂದ ಮತ್ತೆ ರಸ್ತೆಗಳಲ್ಲಿ ಗುಂಡಿ ಬೀಳುತ್ತಿವೆ ಎಂದು ಮಾಹಿತಿ ನೀಡಿದರು. ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ನಮಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ. ಮಳೆ ಬಂದಾಗ ಹಾಟ್ ಮೀಕ್ಸ್ ಬಳಸಲು ಸಾಧ್ಯವಾಗುತ್ತಿಲ್ಲ. ಕೋಲ್ಡ್ ಮಿಕ್ಸ್ […]