ಮೋದಿ ರೋಡ್‌ ಶೋ : ‘ಉರಿಗೌಡ ಮತ್ತು ದೊಡ್ಡ ನಂಜೇಗೌಡ’ ಹೆಸರು ತೆರವು

ಬೆಂಗಳೂರು,ಮಾ.12- ಪ್ರಧಾನಿ ನರೇಂದ್ರ ಮೋದಿ ಭಾನುವಾರ ರೋಡ್‌ ಶೋ ನಡೆಸುವ ಮಾರ್ಗದಲ್ಲಿ ಮಹಾದ್ವಾರಕ್ಕೆ ಇಟ್ಟಿದ್ದ ‘ಉರಿಗೌಡ ಮತ್ತು ದೊಡ್ಡ ನಂಜೇಗೌಡ’ ಹೆಸರನ್ನು ತೆರವು ಮಾಡಲಾಗಿದೆ. ಮಾತ್ರವಲ್ಲದೇ ಆ ಮಹಾದ್ವಾರಕ್ಕೆ ಬಾಲಗಂಗಾಧರ ನಾಥ ಸ್ವಾಮೀಜಿ ಮಹಾದ್ವಾರ ಎಂದು ಹೆಸರಿಡಲಾಗಿದೆ. ರೋಡ್‌ ಶೋ ಆರಂಭವಾದ ಪ್ರವಾಸಿ ಮಂದಿರದ ಬಳಿ ಸರ್‌. ಎಂ.ವಿಶ್ವೇಶ್ವರಯ್ಯ ಮಹಾದ್ವಾರ, ಜೆಸಿ ವೃತ್ತದಲ್ಲಿ ಕೆಂಪೇಗೌಡ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮಹಾದ್ವಾರ, ಫ್ಯಾಕ್ಟರಿ ಸರ್ಕಲ್‌ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ಹಾಕಲಾಗಿತ್ತು. ಉರಿಗೌಡ ಮತ್ತು ದೊಡ್ಡನಂಜೇಗೌಡ […]

ಮೋದಿ ರೋಡ್‍ಶೋ, ಬಿಜೆಪಿಗೆ ಆನೆಬಲ

ಬೆಂಗಳೂರು,ಮಾ.9- ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ಉದ್ಘಾಟನೆಗಾಗಿ ಇದೇ 12ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಅಂದು ಮಂಡ್ಯ ನಗರದಲ್ಲಿ ರೋಡ್ ಶೋ ನಡೆಸಿ ಬಿಜೆಪಿಗೆ ಬಲ ತುಂಬಲಿದ್ದಾರೆ. ಮೋದಿ ಆಗಮನದ ಹಿನ್ನಲೆಯಲ್ಲಿ ಸಕ್ಕರೆ ನಾಡು ಮಂಡ್ಯ ಕೇಸರಿಮಯವಾಗಿದ್ದು, ಮೈಸೂರು ಕರ್ನಾಟಕದಲ್ಲಿ ಈ ಬಾರಿ ಹೆಚ್ಚಿನ ಸ್ಥಾನ ಗಳಿಸುವ ಬಿಜೆಪಿ ಕಾರ್ಯತಂತ್ರಕ್ಕೆ ಪ್ರಧಾನಿಯವರ ಭೇಟಿ ಟಾನಿಕ್ ನೀಡಲಿದೆ ಎಂದು ಹೇಳಲಾಗುತ್ತಿದೆ. ನಗರದ ಪ್ರವಾಸಿಮಂದಿರ ವೃತ್ತದಿಂದ ಪ್ರಾರಂಭವಾಗಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಮಾರ್ಗವಾಗಿ ನಂದಾ ವೃತ್ತದ […]

ಮೋದಿ ಮಂಡ್ಯ ಭೇಟಿ : ಸಂಚಾರ ದಟ್ಟಣೆ ನಿಯಂತ್ರಕ್ಕೆ ಪರ್ಯಾಯ ಮಾರ್ಗ

ಬೆಂಗಳೂರು, ಮಾ.9- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೇ ಮಾರ್ಚ್ 12ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡಲಿರುವ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸೃಷ್ಟಿ ಸಾಧ್ಯತೆ ಹಿನ್ನೆಲೆಯಲ್ಲಿ ಸಂಚಾರ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡು ಪರ್ಯಾಯ ಮಾರ್ಗ ಸೂಚಿಸಿದೆ. ಮಾರ್ಚ್ 12ರಂದು ಮಂಡ್ಯ ಜಿಲ್ಲೆ ಹಾಗೂ ಧಾರವಾಡಕ್ಕೆ ಪ್ರಧಾನಮಂತ್ರಿಗಳು ಆಗಮಿಸಲಿದ್ದಾರೆ. ಅಂದು ಅವರು ಮಧ್ಯಾಹ್ನ 12 ಗಂಟೆಗೆ ದಶಪಥ ರಸ್ತೆಯಾದ ಬೆಂಗಳೂರು- ಮೈಸೂರು ಎಕ್ಸಪ್ರೆಸ್ ವೇ ಅನ್ನು ಉದ್ಘಾಟಿಸಲಿದ್ದಾರೆ. ಬಳಿಕ ಮಂಡ್ಯ ಜಿಲ್ಲೆ ಮದ್ದೂರು […]

ಉತ್ತರ ಕರ್ನಾಟಕದಲ್ಲಿ ಮೋದಿ ಅಬ್ಬರ

ಬೆಂಗಳೂರು,ಜ.12-ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಬೂಸ್ಟ್ ನೀಡಲಿದೆ ಎಂದೇ ಹೇಳಲಾಗಿದ್ದ ಹುಬ್ಬಳ್ಳಿ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ಆಡಳಿತಾರೂಢ ಬಿಜೆಪಿಯಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿತು. ನವದೆಹಲಿಯಿಂದ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರು, ವಿಮಾನ ನಿಲ್ದಾಣದಿಂದ ಸುಮಾರು ಆರು ಕಿ.ಮೀ. ರಸ್ತೆಯಲ್ಲಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ಯುವಜನತೆಯಲ್ಲಿ ಕಿಚ್ಚು ಹಚ್ಚಿಸಿದರು. ಮಧ್ಯಾಹ್ನ 3.30ರಿಂದ ವಿಮಾನ ನಿಲ್ದಾಣದ ಮೂಲಕ ಆರಂಭವಾದ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಆದು ಬಂದಿತು. ಮೋದಿ […]

ಕೇಜ್ರಿವಾಲ್ ರ‍್ಯಾಲಿಯಲ್ಲಿ ಮೋದಿ ಘೋಷಣೆ

ನವದೆಹಲಿ,ನ.21- ಗುಜರಾತ್‍ನಲ್ಲಿ ತನ್ನ ಬಲಾಬಲ ಪ್ರದರ್ಶನಕ್ಕೆ ಮುಂದಾಗಿರುವ ಆಮ್ ಆದ್ಮಿ ಪಕ್ಷ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್‍ನಲ್ಲಿ ರೋಡ್ ಶೋ ನಡೆಸಿ ಆಪ್ ಸರ್ಕಾರಕ್ಕೆ ಸಹಕರಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಯುವಕರ ಗುಂಪೊಂದು ಮೋದಿ ಮೋದಿ ಎಂದು ಜೈಕಾರ ಹಾಕುವ ಮೂಲಕ ಕೇಜ್ರಿವಾಲ್ ಮುಜುಗರ ಉಂಟಾಗುವಂತೆ ಮಾಡಿದ್ದಾರೆ. ಮುಜುಗರದಿಂದ ಧೃತಿಗೆಡದ ಕೇಜ್ರಿವಾಲ್ ಅವರು ಯಾರಿಗೆ ಬೇಕಾದರೂ ಬೆಂಬಲದ ಘೋಷಣೆಗಳನ್ನು ಕೂಗಬಹುದು, ಆದರೆ ಅವರೇ ಅವರ ಮಕ್ಕಳಿಗೆ […]

ಮೋರ್ಬಿ ದುರ್ಘಟನೆ : ಅರವಿಂದ್ ಕೇಜ್ರಿವಾಲ್ ರೋಡ್ ಶೋ ರದ್ದು

ಚಂಡಿಗಡ್, ಅ.31- ಗುಜರಾತ್‍ನ ಮೋಬಿನಲ್ಲಿ ನಡೆದ ತೂಗು ಸೇತುವೆ ದುರಂತದಿಂದಾಗಿ ಹರ್ಯಾಣದ ಅದಂಪುರ್‍ನಲ್ಲಿ ನಡೆಯಬೇಕಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರೋಡ್ ಶೋ ರದ್ದುಗೊಂಡಿದೆ. ಅದಂಪುರ್‍ನಲ್ಲಿ ನಡೆಯಲಿರುವ ಉಪಚುನಾವಣೆ ಸಲುವಾಗಿ ವಿವಿಧ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ನವೆಂಬರ್ 3ಕ್ಕೆ ಉಪಚುನಾವಣೆ ನಡೆಯಲಿದ್ದು, ಮೊನ್ನಾ ದಿನ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಸೋಮವಾರ ರೋಡ್ ಶೋ ಹಮ್ಮಿಕೊಂಡಿದ್ದರು. ಭಾನುವಾರ ಮೋರ್ಬಿಯಲ್ಲಿ ತೂಗು ಸೇತುವೆ ಕುಸಿದು 132ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. […]

ಗುಜರಾತ್‍ನಲ್ಲಿ ಮೋದಿ ಭರ್ಜರಿ ರೋಡ್ ಶೋ

ಭುಜï, ಅ 28 (ಪಿಟಿಐ)-ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಗುಜರಾತ್‍ನಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭರ್ಜರಿ ರೋಡ್ ಶೋ ನಡೆಸಿದರು. ಭುಜ್ ಪಟ್ಟಣದ ಹಿಲ್ ಗಾರ್ಡನ್ ವೃತ್ತ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ನಡುವಿನ ಮೂರು ಕಿಲೋಮೀಟರ್ ಉದ್ದದ ರ್ಯಾಲಿ ಸಂದರ್ಭದಲ್ಲಿ ಮೋದಿ ಅವರನ್ನು ಸ್ವಾಗತಿಸಲು ಭುಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಾರು ಜನರು ರಸ್ತೆಯ ಎರಡೂ ಬದಿಗಳಲ್ಲಿ ಜಮಾಯಿಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಉತ್ಸಾಹಿ ಜನರು ಮೋದಿ ಮೋದಿ […]