ದರೋಡೆಗೆ ಸಂಚು ರೂಪಿಸುತ್ತಿದ್ದ 4 ಮಂದಿ ಬಂಧನ

ಬೆಂಗಳೂರು,ಫೆ.6- ದರೋಡೆಗೆ ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ ಕುಳ್ಳ ರಿಜ್ವಾನ್‍ನ ನಾಲ್ಕು ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಹನುಮಂತನಗರ ಪೊಲೀಸ್ ಠಾಣಾ ಸರಹದ್ದಿನ ಸುಂಕೇನಹಳ್ಳಿ ಯಲ್ಲಿರುವ ಅಪಾರ್ಟ್‍ಮೆಂಟ್‍ವೊಂದರ ಮುಂಭಾಗ ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆ ಮಾಡಲು ಐದು ಮಂದಿ ಆರೋಪಿಗಳು ಹೊಂಚು ಹಾಕುತ್ತಿದ್ದರು. ಈ ಬಗ್ಗೆ ಸುದ್ದಿ ತಿಳಿದ ಸಿಸಿಬಿ ಪೊಲೀಸರು ಸ್ಥಳಕ್ಕೆ ಧಾವಿಸಿ ನಾಲ್ಕು ಮಂದಿಯನ್ನು ಬಂಸಿ, ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಒಬ್ಬ ಆರೋಪಿ ಪರಾರಿಯಾಗಿದ್ದಾನೆ. ಈ ಬಗ್ಗೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]