ರಾಜ್ಯಾದ್ಯಂತ 480 ನಮ್ಮ ಕ್ಲಿನಿಕ್ ಪ್ರಾರಂಭ: ಸಚಿವ ಸುಧಾಕರ್

ಬೆಂಗಳೂರು,ಜು.22- ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 480 ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಿಮ್ಹಾನ್ಸ್ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಿದುಳು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ವಿಶೇಷ ಕ್ಲಿನಿಕ್ ಸ್ಥಾಪಿಸಲಾಗುವುದು ಎಂದರು. ಬೆಂಗಳೂರಿನಲ್ಲಿ 243 ವಾರ್ಡ್‍ಗಳಲ್ಲೂ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗುವುದು. ರಾಜ್ಯದ ಪ್ರತಿಯೊಬ್ಬರಿಗೂ ನೇತ್ರ ತಪಾಸಣೆ ಕೈಗೊಂಡು ಅಗತ್ಯವಿದ್ದರೆ ಉಚಿತ ಕನ್ನಡಕ ನೀಡಲಾಗುವುದು. ಕಣ್ಣಿನ ಪರೆಯ ಶಸ್ತ್ರ ಚಿಕಿತ್ಸೆಯನ್ನು ಸಹ […]