ಐಪಿಎಸ್ – ಐಎಎಸ್ ಬೀದಿ ಸಂಘರ್ಷ ವಿರುದ್ಧ ಕಠಿಣ ಕ್ರಮ : ಸಚಿವ ಅಶ್ವಥ್ ನಾರಾಯಣ್

ಬೆÉಂಗಳೂರು ,ಫೆ.22- ಮಹಿಳಾ ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷ ದಲ್ಲಿ ಸರ್ಕಾರ ಇಬ್ಬರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಭರವಸೆ ನೀಡಿದರು. ವಿಧಾನ ಪರಿಷತ್‍ನ ಶೂನ್ಯವೇಳೆಯಲ್ಲಿ ಹಿರಿಯ ಸದಸ್ಯ ಎಚ್.ವಿಶ್ವನಾಥ್ ವಿಷಯ ಪ್ರಸ್ತಾಪಿಸಿ, ಐಪಿಎಸ್ ಅಧಿಕಾರಿ ರೂಪಾ ಮ ದ್ಗಿಲ್, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಾಮಾಜಿಕ ಜಾಲತಾಣಗಳಿಂದ ಆರಂಭಿಸಿ ಮಾಧ್ಯಮಗಳ ಮುಖಾಂತರ ಪರಸ್ಪರ ಟೀಕೆ, ಆರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸರ್ಕಾರದ ದಕ್ಷತೆ ಬಗ್ಗೆ ಜನರಲ್ಲಿ […]
ನನ್ನ ಕುಟುಂಬ ಉಳಿಸಿಕೊಳ್ಳಲು ಹೋರಾಟ :ಮತ್ತೆ ಗುಡುಗಿದ ರೂಪಾ..

ಬೆಂಗಳೂರು,ಫೆ.22- ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಂದು ಪೋಸ್ಟ್ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಮಾಧ್ಯಮಗಳ ಮುಂದೆ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪೆಫೋಸ್ಟ್ ಮಾಡಿದರೆ ಅಖಿಲ ಭಾರತ ಸೇವಾ ನಿಯಮ ಉಲ್ಲಂಘನೆ ಎಂದೇ ಪರಿಗಣಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ಕೊಟ್ಟರೂ ಸುಮ್ಮನಾಗದ ರೂಪಾ ಅವರು ಇಂದು ಮತ್ತೆ ರೋಹಿಣಿ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. […]
IAS- IPS ಬೀದಿ ಜಗಳಕ್ಕೆ ಮತ್ತೊಂದು ಟ್ವಿಸ್ಟ್

ಬೆಂಗಳೂರು,ಫೆ.22- ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ವಾಕ್ಸಮರ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಸಾಮಾಜಿಕ ಕಾರ್ಯಕರ್ತ ಗಂಗರಾಜು ಎಂಬುವರ ಜೊತೆ ರೂಪ ಮೌದ್ಗಿಲ್ ನಡೆಸಿರುವ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗಿದ್ದು, ಸದ್ಯ ವರ್ಗಾವಣೆಗೊಂಡಿರುವ ರೋಹಿಣಿ ಸಿಂಧೂರಿ ವಿರುದ್ಧ ವೈಯಕ್ತಿಕ ಮಟ್ಟದಲ್ಲಿ ದಾಳಿ ನಡೆಸಿದ್ದಾರೆ. ಡಿ.ರೂಪಾ ಅವರು ರೋಹಿಣಿ ಸಿಂಧೂರಿಯವರನ್ನು ಹಿಗ್ಗಾಮುಗ್ಗ ಬೈಯುತ್ತಿರುವ ಮತ್ತು ತಮ್ಮ ಸಂಸಾರದ ವಿಷಯಗಳನ್ನು ಪ್ರಸ್ತಾಪಿಸಿರುವ ಆಡಿಯೋ ಬಿಡುಗಡೆಯಾಗಿದೆ. ಆಡಿಯೋದಲ್ಲಿ ರೂಪ ಅವರು, ಐಎಎಸ್ ಅಧಿಕಾರಿ ರೋಹಿಣಿ […]
ಬೀದಿ ಜಗಳಕ್ಕಿಳಿದ ರೂಪ – ರೋಹಿಣಿ ಎತ್ತಂಗಡಿ..?

ಬೆಂಗಳೂರು,ಫೆ.21- ಸರ್ಕಾರಕ್ಕೆ ಮುಜುಗರ ಸೃಷ್ಟಿಸಿರುವ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಜಿಪಿ ರೂಪ ಮೌದ್ಗಿಲ್ ಅವರನ್ನು ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಎತ್ತಂಗಡಿ ಮಾಡಲಿದೆ. ವರ್ಗಾವಣೆ ಮಾಡಿದರೂ ಇಬ್ಬರಿಗೂ ಸದ್ಯಕ್ಕೆ ಯಾವುದೇ ಸ್ಥಳಕ್ಕೆ ನಿಯೋಜನೆ ಮಾಡದೆ ರಜೆ ತೆಗೆದುಕೊಳ್ಳಲು ಸೂಚನೆ ನೀಡಲಾಗುತ್ತದೆ. ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಹಾಗೂ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪ ಮೌದ್ಗಿಲ್ ಅವರನ್ನು ಇಂದು ಸಂಜೆಯೊಳಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಗ್ಯಾಂಗ್‍ಸ್ಟರ್ […]
ಹಾದಿ ಬೀದಿ ರಂಪಾಟ : ರೂಪ-ರೋಹಿಣಿಗೆ ನೋಟಿಸ್ ಜಾರಿ

ಬೆಂಗಳೂರು,ಫೆ.21-ರಾಜ್ಯ ಸರ್ಕಾರಕ್ಕೆ ತೀವ್ರ ಮುಜಗರ ಸೃಷ್ಟಿಸಿದ ಹಿನ್ನಲೆಯಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಅವರಿಗೆ ಹದ್ದಮೀರಿ ವರ್ತಿಸದಂತೆ ರಾಜ್ಯ ಸರ್ಕಾರ ಎಚ್ಚರಿಕೆ ಕೊಟ್ಟಿದೆ. ಈ ಸಂಬಂಧ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಮೂಲಕ ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಮತ್ತು ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪ ಮೌದ್ಗಿಲ್‍ಗೆ ನೋಟಿಸ್ ಜಾರಿ ಮಾಡಿ ನಿಯಮ ಮೀರಿ ವರ್ತಿಸದಂತೆ ತಾಕೀತು ಮಾಡಲಾಗಿದೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ […]
IAS vs IPS : ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಗಂಭೀರ ಆರೋಪ

ಬೆಂಗಳೂರು,ಫೆ.19- ಧಾರ್ಮಿಕ ದತ್ತಿ, ಮುಜರಾಯಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪಾ ಮೌಡ್ಗಿಲ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, 19 ಗಂಭೀರವಾದ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಅವುಗಳಲ್ಲಿ ಅನೇಕ ವಿಷಯಗಳು ಅತ್ಯಂತ ಗಂಭೀರವಾಗಿದ್ದು, ತನಿಖೆಗೂ ಒತ್ತಾಯಿಸಲಾಗಿದೆ. ಡಿ ರೂಪಾ ಮೌಡ್ಗಿಲ್ ಎಂಬ ಫೇಸ್ ಬುಕ್‍ನಲ್ಲಿ ಸುದೀರ್ಘ ಲೇಖನವನ್ನು ಪ್ರಕಟಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಸಂಘರ್ಷಕ್ಕೆ ಚಾಲನೆ ಸಿಕ್ಕಂತಾಗಿದೆ. ಲೇಖನದ ಯಥಾವತ್ತು ಕೆಳಗಿನಂತಿದೆ. ಇಂದಿನ ಸುದ್ದಿ, ಎಲ್ಲಾ ಕಡೆ ವೈರಲ್ ಆಗಿರೋದು, ರೋಹಿಣಿ […]