ಉಗ್ರ ಶಾರೀಕ್‍ಗೆ ಕೇರಳ ನಂಟು ಕುರಿತು ಅಧಿಕಾರಿಗಳಿಂದ ಶೋಧ

ಬೆಂಗಳೂರು,ಡಿ.1- ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರೀಕ್ ಜೊತೆಗಿನ ಕೇರಳದ ಸಂಪರ್ಕವನ್ನು ಪತ್ತೆಹಚ್ಚುವತ್ತ ಗಮನಹರಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಮತ್ತು ಸೈಬರ್ ಕ್ರೈಂ ಘಟಕದ ಅಧಿಕಾರಿಗಳು ಈಗಾಗಲೇ ಕೇರಳ ತಲುಪಿದ್ದು, ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರೀಕ್‍ನ ನಂಟು ಭೇದಿಸಲು ಹುಡುಕಾಟ ನಡೆಸಿದ್ದಾರೆ. ಮೊಹಮ್ಮದ್ ಶಾರೀಕ್ ಕೇರಳದ ಆಲುವಾ, ಮುನಂಬಂ ಮತ್ತು ಕೊಚ್ಚಿ ನಗರಗಳಲ್ಲಿ ತಂಗಿದ್ದ ಎಂಬ ಮಾಹಿತಿ ಸಿಕ್ಕಿದೆ. ಮೊಹಮ್ಮದ್ ಶಾರೀಕ್ ಡ್ರಗ್ ದಂಧೆಯಲ್ಲಿಯೂ ಭಾಗಿಯಾಗಿರುವ ಬಗ್ಗೆಯೂ […]