ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ 1 ಕೋಟಿಗೂ ಹೆಚ್ಚಿನ ಮೌಲ್ಯದ ಚಿನ್ನ ವಶ

ರಾಂಚಿ(ಜಾರ್ಖಂಡ್),ಜು.17- ವಿದೇಶದಿಂದ ಚಿನ್ನವನ್ನು ಅಕ್ರಮವಾಗಿ ಕಳ್ಳಸಾಗಾಣಿಕೆ ಮಾಡುಕೊಂಡು ಬಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಅಬಕಾರಿ ಅಧಿಕಾರಿಗಳು, ಒಂದು ಕೋಟಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದಾಗ ಕಳ್ಳಸಾಗಣೆಯ ಚಿನ್ನ ಪತ್ತೆಯಾಗಿದೆ. ಪ್ರಯಾಣಿಕರೊಬ್ಬರ ಸಾಮಾನು ಸರಂಜಾಮುಗಳಲ್ಲಿ ಈ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ. ಈ ಪ್ರಯಾಣಿಕನು ಶಾಜರ್ದಿಂದ ಏರ್ ಅರೇಬಿಯಾ ಜಿ-9435 ವಿಮಾನದಲ್ಲಿ ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]