ಬಜೆಟ್‍ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ಸಿಂಹಪಾಲು

ನವದೆಹಲಿ,ಫೆ.1- ಪ್ರಸಕ್ತ ಆರ್ಥಿಕ ವರ್ಷದಲ್ಲಿ 45 ಲಕ್ಷ ಕೋಟಿ ರೂಪಾಯಿ ವೆಚ್ಚದ 2023-24ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ಮಂಡಿಸಿದರು. ಹಿಂದಿನ ವರ್ಷ 24.3 ಲಕ್ಷ ಕೋಟಿ ಒಟ್ಟು ಆದಾಯ ಮತ್ತು 20.9 ಲಕ್ಷ ಕೋಟಿ ನಿವ್ವಳ ತೆರಿಗೆ ಆದಾಯವನ್ನು ನಿರೀಕ್ಷಿಸಲಾಗಿತ್ತು. ಒಟ್ಟು ಬಜೆಟ್‍ನ ಗಾತ್ರ 41.9 ಲಕ್ಷ ಕೋಟಿ ರೂಪಾಯಿಗಳಿತ್ತು. ಅದರಲ್ಲಿ ಬಂಡವಾಳ ವೆಚ್ಚಗಳನ್ನು 7.3 ಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿತ್ತು. ಕೃಷಿ ಸಾಲಕ್ಕೆ 20 ಲಕ್ಷ ಕೋಟಿ ವಿತ್ತಿಯ […]