ನಡು ರಸ್ತೆಯಲ್ಲೇ ಹೊತ್ತಿ ಉರಿದ ಚಲಿಸುತ್ತಿದ್ದ ಬಿಎಂಟಿಸಿ ಬಸ್

ಬೆಂಗಳೂರು, ಜ.21- ಚಲಿಸುತ್ತಿದ್ದ ಬಿಎಂಟಿಸಿ ಬಸ್ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು.16ನೆ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ಇಂದು ಬೆಳಗ್ಗೆ 11.30ರ ಸುಮಾರಿನಲ್ಲಿ ಹೊಸಕೆರೆ ಹಳ್ಳಿಯಿಂದ ಸಿಟಿ ಮಾರ್ಕೆಟ್ಗೆ ಬರುತ್ತಿತ್ತು. ಮಕ್ಕಳ ಕೂಟದ ಬಳಿ ಬಸ್ನ ಮುಂಭಾಗದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಚಾಲಕ ಹಾಗೂ ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಸ್ನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿ ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯಿಂದಾಗಿ ಬಸ್ ಶೇ.15ರಷ್ಟು ಹಾನಿಯಾಗಿದೆ. ಸುದ್ದಿ ತಿಳಿದು ಅಗ್ನಿ ಶಾಮಕ ವಾಹನವೂ […]