ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ : ಸಚ್ಚಿದಾನಂದ

ಬೆಂಗಳೂರು,ಜ.13- ಯಾವ ಪಕ್ಷ ಸೇರ್ಪಡೆಯಾಗಬೇಕು ಎಂಬುದರ ಕುರಿತು ಹಿತೈಷಿಗಳು ಹಾಗೂ ಜಿಲ್ಲೆಯ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚಿಸಿದ ಬಳಿಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಶೀಘ್ರದಲ್ಲೇ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ಇಂಡುವಾಳ ಸಚ್ಚಿದಾನಂದ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಮಲತಾ ಅಂಬರೀಶ್ ಅವರನ್ನು, ಪಕ್ಷಕ್ಕೆ ಬರುವಂತೆ ಬಿಜೆಪಿ ಕೆಲವು ನಾಯಕರು ಆಹ್ವಾನ ನೀಡಿರುವುದು ಸತ್ಯ. ಆದರೆ ಇದುವರೆಗೂ ಯಾವುದೇ ನಿರ್ಧಾರವನ್ನು ಈವರೆಗೂ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಸುಮಲತಾ ಅಂಬರೀಶ್ ತುಂಬ ಸ್ಪಷ್ಟತೆ […]