ರಾಜ್ಯದಲ್ಲಿ ಮತ್ತೆ ಹೆಚ್ಚಾದ ಕೇಸರಿ ಕಿಚ್ಚು

ಬೆಂಗಳೂರು,ನ.14- ವಿವೇಕ ಯೋಜನೆಯಡಿ ನೂತನವಾಗಿ ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಹಾಗೂ ಪದವಿಪೂರ್ವ ಕಾಲೇಜು ಕೊಠಡಿಗಳಿಗೆ ಕೇಸರಿ ಬಣ್ಣ ಹಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ತೀವ್ರ ವಿವಾದ ಸೃಷ್ಟಿಸಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್, ಪ್ರಗತಿಪರರು, ಬುದ್ದಿಜೀವಿಗಳು, ಚಿಂತಕರು, ಶಿಕ್ಷಣ ತಜ್ಞರು ತೀವ್ರವಾಗಿ ವಿರೋಧಿಸಿ ಇದು ಬಿಜೆಪಿಯ ಕೇಸರೀಕರಣದ ಮುಂದುವರೆದ ಭಾಗ ಎಂದು ಕಟುವಾಗಿ ಟೀಕಿಸಿದ್ದಾರೆ. ಆದರೆ ಸರ್ಕಾರ ಮಾತ್ರ ಇದನ್ನು ಬಲವಾಗಿ ಸಮರ್ಥಿಸಿಕೊಂಡಿದೆ. ಶಿಕ್ಷಣಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಸರ್ಕಾರ ಶಾಲಾ ಶಿಕ್ಷಣ […]

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ

ಬೆಂಗಳೂರು,ನ.14- ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹಚ್ಚಿದರೆ ವಿರೋಧ ಪಕ್ಷದವರಿಗೆ ಏನು ಸಮಸ್ಯೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳ ನಡೆಗೆ ಆಕ್ಷೇಪಿಸಿದರು. ವಿಧಾನಸೌಧದಲ್ಲಿ ಪಂಡಿತ್ ಜವಹಾರ್ ಲಾಲ್ ನೆಹರು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಪ್ರತಿಪಕ್ಷಗಳು ಪ್ರತಿಯೊಂದರಲ್ಲೂ ವಿರೋಧ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಷ್ಟಕ್ಕೂ ಕೇಸರಿ ಬಣ್ಣ ಕಂಡರೆ ಇವರಿಗೆ ಆಗುವುದೇ ಇಲ್ಲವೇ. ಕೇಸರಿ ಬಣ್ಣ ನಮ್ಮ ಭಾರತದ ಧ್ವಜದಲ್ಲೇ ಇದೆ. ಕೇಸರಿ ಬಣ್ಣ ಕಂಡರೆ ಯಾಕೆ […]