ಪರ್ಯಾಯ ಸಮ್ಮೇಳನಕ್ಕೆ ಸಚಿವ ಸುನೀಲ್ ಆಕ್ಷೇಪ

ಹಾವೇರಿ, ಜ.6- ಸರ್ಕಾರದ ವತಿಯಿಂದ ನಡೆಯುತ್ತಿರುವ ಸಮ್ಮೇಳನಕ್ಕೆ ವಿರುದ್ಧವಾಗಿ ಪರ್ಯಾಯ ಸಮ್ಮೇಳನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಂಡಾಯ ಎದ್ದಿರುವ ಕೆಲ ಹಿರಿಯ ಸಾಹಿತಿಗಳು ಪರ್ಯಾಯ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ. ಈ ಸಂಬಂಧ ಹಾವೇರಿಯಲ್ಲಿ ಆರಂಭವಾಗಿರುವ 86ನೇ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮಾತನಾಡಿದ […]

ಕನಕನ ನಾಡಲ್ಲಿ ಮೊಳಗಿದ ಕನ್ನಡ ಕಹಳೆ

ಹಾವೇರಿ, ಜ.6- ಏಲಕ್ಕಿ ನಾಡು ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವ ಮೂಲಕ ಅಕ್ಷರ ಜಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಸಮ್ಮೇಳನ ನಡೆಯುವ ಮುಖ್ಯ ವೇದಿಕೆ ಎದುರು ಬೆಳಗ್ಗೆ 7 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಸಾಹಿತ್ಯ ಉತ್ಸವಕ್ಕೆ ಚಾಲನೆ ನೀಡಿದರು. ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ ಅವರು ಭುವನೇಶ್ವರಿಗೆ ಪೂಜೆ […]

ನುಡಿಜಾತ್ರೆಗೆ ನವ ವಧುವಿನಂತೆ ಸಿಂಗಾರಗೊಂಡ ಏಲಕ್ಕಿ ನಗರಿ ಹಾವೇರಿ

ಹಾವೇರಿ, ಜ.5- ಏಲಕ್ಕಿ ನಗರ ಹಾವೇರಿ ನವ ವಧುವಿನಂತೆ ಸಿಂಗಾರಗೊಂಡಿದೆ. ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ 86ನೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಅಕ್ಷರಜಾತ್ರೆಗೆ ನಗರಾದ್ಯಂತ ಕನ್ನಡದ ಬಾವುಟಗಳು ರಾರಾಜಿಸುತ್ತಿವೆ. ಮೈಸೂರು ದಸರಾ ಮಾದರಿಯಲ್ಲಿ ವಿದ್ಯುತ್ ಅಲಂಕಾರ ಮಾಡಲಾಗಿದ್ದು, ಹಾವೇರಿ ನಗರ ನಿನ್ನೆಯಿಂದಲೇ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ. ನಗರದ ಎಲ್ಲ ವೃತ್ತಗಳು, ಪ್ರಮುಖ ದ್ವಾರ, ಬಸ್ ನಿಲ್ದಾಣ, ಉದ್ಯಾನವನ ಸೇರಿದಂತೆ ಎಲ್ಲ ಕಡೆ ಹೂವಿನ ಅಲಂಕಾರ ಮಾಡಲಾಗಿದೆ. ಕನ್ನಡದ ಕೀರ್ತಿ ಪತಾಕೆ ಸಾರುವಂತಹ […]