ಪ್ರವಾಸಿ ಗೈಡ್‍ಗಳ ಮಾಸಿಕ ವೇತನ 5000 ರೂ.ಗೆ ಹೆಚ್ಚಳ

ಬೆಂಗಳೂರು,ಸೆ.28- ರಾಜ್ಯದ ಪ್ರವಾಸೋದ್ಯಮ ತಾಣಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಪ್ರಚುರಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಗೈಡ್‍ಗಳಿಗೆ ನೀಡಲಾಗುತ್ತಿರುವ ಮಾಸಿಕ ವೇತನವನ್ನು 2000 ರೂ.ನಿಂದ 5000 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೈಡ್‍ಗಳಿಗೆ ಈವರೆಗೂ ತಿಂಗಳಿಗೆ 2000 ರೂ. ವೇತನವನ್ನು ನೀಡಲಾಗುತ್ತಿತ್ತು. ಅದನ್ನು 5 ಸಾವಿರಕ್ಕೆ ಹೆಚ್ಚಳ ಮಾಡು ವುದಾಗಿ ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿತ್ತು. ಆದಷ್ಟು ಶೀಘ್ರ […]

ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಪರಿಷ್ಕರಣೆ

ಬೆಂಗಳೂರು,ಸೆ.16-ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2016ರಲ್ಲಿ ವೇತನ ಪರಿಷ್ಕರಣೆಯಾಗಿದೆ. ಆನಂತರ ಪರಿಷ್ಕರಣೆಯಾಗಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದೆ. 2021ರಲ್ಲಿ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಿದ್ದರು. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ […]

ಸರ್ಕಾರದ ಅಧಿಕೃತ ಆದೇಶಗಳಲ್ಲಿ ಕನ್ನಡ ದೋಷವಾದರೆ ಸಂಬಳ ಕಟ್

ಬೆಂಗಳೂರು,ಜು.18- ರಾಜ್ಯ ಸರ್ಕಾರಿ ನೌಕರರೇ ಎಚ್ಚರ! ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಅಥವಾ ವ್ಯಾಕರಣದಲ್ಲಿ ದೋಷವಾದರೆ, ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಮುಂಬರುವ ವಿಧಾನಮಂಡಲದ ಉಭಯ ಸದನಗಳಲ್ಲಿ ಕನ್ನಡದ ಸುತ್ತೋಲೆಗಳನ್ನು ತಪ್ಪು ತಪ್ಪಾಗಿ ಮುದ್ರಣ ಮಾಡುವ ಇಲ್ಲವೇ ವ್ಯಾಕರಣ ದೋಷ ಮಾಡುವವರ ಮೇಲೆ ಶಿಸ್ತು ಕ್ರಮ ಜರುಗಿಸಲು ಹಾಲಿ ಇರುವ ನಿಯಮಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ತಿದ್ದುಪಡಿ ಮಾಡಲು ಮುಂದಾಗಿದೆ. ವಿಧಾನಸಭೆ ಹಾಗೂ ವಿಧಾನಮಂಡದಲ್ಲಿ, […]