ವೇತನ ಹೆಚ್ಚಳ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸರ್ಕಾರಿ ನೌಕರರು

ಬೆಂಗಳೂರು,ಮಾ.1- ಬರುವ ಏಪ್ರಿಲ್ 1ರಿಂದಲೇ ಜಾರಿಯಗುವಂತೆ ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಸರ್ಕಾರಿ ನೌಕರರು ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ಹಿಂಪಡೆದಿದ್ದಾರೆ. ಇದರಿಂದಾಗಿ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದ್ದು, ಆಸ್ಪತ್ರೆ ಪುರಸಭೆ, ನಗರಸಭೆ, ಆರೋಗ್ಯ ಕೇಂದ್ರಗಳು ಸೇರಿದಂತೆ ಸರ್ಕಾರದ ಎಲ್ಲ ಸೇವೆಗಳಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ ಹಣಕಾಸು ಇಲಾಖೆ ಅಕಾರಿಗಳ ಜೊತೆ ಚರ್ಚಿಸಿ ಸರ್ಕಾರಿ ನೌಕರರ ಬೇಡಿಕೆಯಂತೆ ಶೇ.17ರಷ್ಟು ವೇತನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದರು.ಆದರೆ ಇದನ್ನು ಒಪ್ಪದ […]