ಕೋಲ್ಡ್ ಸ್ಟೋರೇಜ್ ಕುಸಿದು 14 ಮಂದಿ ಸಾವಿನ ಪ್ರಕರಣ, ಇಬ್ಬರು ಮಾಲೀಕರ ಬಂಧನ

ಸಂಭಾಲ್,ಮಾ.18- ಅಕ್ರಮವಾಗಿ ನಿರ್ಮಿಸಲಾಗಿದ್ದ ಕೋಲ್ಡ್ ಸ್ಟೋರೇಜ್ ಕುಸಿತು 14 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಚಂಡೌಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ರಸ್ತೆಯಲ್ಲಿದ್ದ ಕೋಲ್ಡ್‍ಸ್ಟೋರೆಜ್ ಗುರುವಾರ ಕುಸಿದಿತ್ತು, ಅದರಡಿ ಸಿಲುಕಿದ್ದ 24 ಜನರನ್ನು ಹೊರತೆಗೆಯಲಾಗಿದೆ. ಅವರಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಕೋಲ್ಡ್ ಸ್ಟೋರೇಜ್ ಮಾಲೀಕರಾದ ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಅವರನ್ನು ಉತ್ತರಾಖಾಂಡದ ಹಲ್ದ್ವಾನಿಯಿಂದ ಬಂಧಿಸಲಾಗಿದೆ ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ಶ್ರೀಲಂಕಾ ನೆರವಿಗೆ […]