ಮದುವೆಯಾಗುವುದಾಗಿ ನಂಬಿಸಿ ನಟಿಗೆ ವಂಚಿಸಿದ ನಿರ್ಮಾಪಕನ ಬಂಧನ

ಬೆಂಗಳೂರು, ಜ.29- ನಟಿಗೆ ವಂಚನೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು, ನಟ/ ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ್ ಭಾರ್ಗವ್‍ನನ್ನು ಬಂಧಿಸಿದ್ದಾರೆ. ಸಹ ನಟಿಯೊಬ್ಬರು ಇವರ ವಿರುದ್ದ ದೂರು ನೀಡಿದ್ದ ಹಿನ್ನಲೆಯಲ್ಲಿ ಇವರನ್ನು ಬಂಧಿಸಲಾಗಿದೆ. ಸುಮಾರು ಎರಡು ವರ್ಷಗಳಿಂದ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾಗಿ ಆ ನಟಿ ಆರೋಪಿಸಿ ದೂರು ನೀಡಿದ್ದರು. ಮದುವೆಯಾಗುವುದಾಗಿ ಹೇಳಿದ್ದರು. ಆದರೆ ಮದುವೆ ಮಾಡಿಕೊಳ್ಳಲು ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಮಾಡಿಸುವುದಾಗಿ ಬೆದರಿಕೆ […]