ಶಾಲೆ, ಕಾಲೇಜುಗಳಲ್ಲಿ ರಾಯಣ್ಣನ ಭಾವಚಿತ್ರ ಹಾಕಲು ಸಿಎಂ ಬೊಮ್ಮಾಯಿ ಆದೇಶ

ಬೆಂಗಳೂರು,ಜ.26- ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಯೋಧ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು. ನಗರದ ಮೆಜೆಸ್ಟಿಕ್‍ನಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾಯಣ್ಣನ ಶೌರ್ಯ, ದೇಶಭಕ್ತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಅವರ ಭಾವಚಿತ್ರವನ್ನು ಅಳವಡಿಸಲಾಗುವುದು . ಇಂದೇ ಇದಕ್ಕೆ ಅದೇಶ ಹೊರಡಿಸುವುದಾಗಿ ಹೇಳಿದರು. ಇಷ್ಟು ವರ್ಷಗಳಿಂದ ಸಂಗೊಳ್ಳಿ ರಾಯಣ್ಣನ ಸ್ಮರಣೋತ್ತರ ಕಾರ್ಯಕ್ರಮವನ್ನು […]